ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆ ಬಸವರಾಜ್ ಹಾಸ್ಪಿಟಲ್ ರಸ್ತೆಯಲ್ಲಿರುವ ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದಿವಂಗತ ರಾಜೀವ್ ಗಾಂಧಿಯವರ 31ನೇ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ಡಿ.ಸುಧಾಕರ್, ಈ ಹಿರಿಯೂರು ತಾಲ್ಲೂಕಿನಲ್ಲಿ,10 ವರ್ಷಗಳ ಕಾಲ ಎಲ್ಲಾ ವರ್ಗದ ಜನರಿಗೆ ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ. ನನ್ನ ಆಡಳಿತ ಅವಧಿಯಲ್ಲಿ ಹಿರಿಯೂರು ತಾಲ್ಲೂಕಿನಲ್ಲಿ ಆದಂತಹ ಅಭಿವೃದ್ದಿ ಕಾರ್ಯಗಳು ಇನ್ನೂ ಯಾರಿಂದಲೂ ಮಾಡಲು ಸಾಧ್ಯವಿಲ್ಲ. ಹಿರಿಯೂರು ತಾಲ್ಲೂಕಿಗೆ ನನ್ನ ಆಡಳಿತ ಅವಧಿಯಲ್ಲಿ ಆದಂತ ಕೋಟ್ಯಾಂತರ ರೂ.ಗಳ ಚೆಕ್ ಡ್ಯಾಂಗಳು, ಮುರಾರ್ಜಿ ಶಾಲೆಗಳು, ರಸ್ತೆ ಅಭಿವೃದ್ದಿ ಕೆಲಸಗಳನ್ನ ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ನಾನು ಮೂಲತಃ ರಾಜಕಾರಣಿಯಲ್ಲ. ನಾನು ರಾಜಕೀಯ ಮಾಡಲೂ ಬಂದಿಲ್ಲ. ನನ್ನ ಕೈಲಾದಷ್ಟು ಸಹಾಯ ಮಾಡಲು ಬಂದಿರುವ ವ್ಯಕ್ತಿ. ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಸತ್ಯ. ಎಲ್ಲಾರೂ ಪ್ರಾಮಾಣಿಕವಾಗಿ ಪಕ್ಷದ ಗೆಲುವಿಗೆ ಶ್ರಮಿಸ ಬೇಕು ಎಂದರು.
ಕಾಂಗ್ರೆಸ್ ಪಕ್ಷ ಈ ದೇಶದ ಶಕ್ತಿ ಈಗಿನ ಪ್ರಧಾನಮಂತ್ರಿಯವರು ಪ್ರತಿ ವರ್ಷ 2 ಕೋಟಿ ಹುದ್ದೆಗಳನ್ನ ಸೃಷ್ಟಿ ಮಾಡುತ್ತೇನೆಂದು ಅಧಿಕಾರಕ್ಕೆ ಬಂದು ಸರ್ಕಾರಿ ಇಲಾಖೆಗಳನ್ನ ಖಾಸಗಿಯವರಿಗೆ ಮಾರಿ ದೇಶದ ಜನರಿಗೆ ಮೋಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿ.ಜೆ.ಪಿ ಸರ್ಕಾರ ಸರ್ಕಾರಿ ಕೆಲಸಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಹುದ್ದೆ, ಪ್ರಾಧ್ಯಾಪಕರ ಹುದ್ದೆ, ಎಫ್.ಡಿ.ಎ. ಹುದ್ದೆ, ಸಹಾಯಕ ಇಂಜಿನಿಯರ್ ನೇಮಕಾತಿಯಲ್ಲಿ ಹುದ್ದೆಗಳನ್ನ ಹರಾಜಿಗಿಟ್ಟಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇಂತ ಭ್ರಷ್ಟ ಸರ್ಕಾರ ಈ ಹಿಂದೆ ಬಂದಿಲ್ಲ, ಮುಂದೆಯೂ ಬರುವುದಿಲ್ಲ ಎಂಬುದಾಗಿ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಎಂ.ಎಲ್.ಸಿ ಅಭ್ಯರ್ಥಿ ಆಗಿದಂತಹ ಸೋಮಣ್ಣನವರು ಹಿರಿಯೂರು ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗಲಿಕ್ಕೆ ಓಡಾಡುತ್ತಿಲ್ಲ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಭ್ಯರ್ಥಿ ಆಗಿದಂತವರು, ಮುಖಂಡರು ಕರೆದರೆ ಗ್ರಾಮಗಳಿಗೆ ಹೋಗುತ್ತಿದ್ದಾರೆ. ಕಾರ್ಯಕರ್ತರು ಮುಖಂಡರು ಯಾವುದೇ ಕಾರಣಕ್ಕೂ ಗೊಂದಲ ಮಾಡಿಕೊಳ್ಳದೇ ಡಿ.ಸುಧಾಕರ್ ರವರ ಗೆಲುವಿಗೆ ಶ್ರಮಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಿ.ಸುಧಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ ಪೀರ್ ರವರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತನಂದಿನಿ ಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್ ರವರು, ನೂತನ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈರಲಿಂಗೇಗೌಡ, ಕೆ.ಪಿ.ಸಿ.ಸಿ ಸದಸ್ಯರಾದ ಎ.ಎಂ.ಅಮೃತೇಶ್ವರಸ್ವಾಮಿ, ನಗರಸಭಾ ಅಧ್ಯಕ್ಷರಾದ ಶಂಶುನ್ನೀಸಾ, ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಸ್ತಾಯಿ ಸಮಿತಿ ಅಧ್ಯಕ್ಷರಾದ ಅಜಯ್ ಕುಮಾರ್, ಎಲ್ಲಾ ನಗರಸಭಾ ಸದಸ್ಯರು , ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಆರ್.ನಾಗೇಂದ್ರನಾಯ್ಕ, ,ಕಲ್ಲಹಟ್ಟಿ ಹರೀಶ್ , ಕಾರ್ಮಿಕ ಘಟಕ ಅಧ್ಯಕ್ಷರಾದ ವಿ.ಶಿವಕುಮಾರ್, ಎಸ್.ಟಿ ಘಟಕ ಅಧ್ಯಕ್ಷರಾದ ಗಿರೀಶ್ ಕುಮಾರ್, ಎಸ್.ಸಿ ಘಟಕ ಜ್ಞಾನೇಶ್, ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5