ದಾವಣಗೆರೆ: ನಾನು ಮತ್ತು ಶಿವಕುಮಾರ್ ಒಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿದ್ದರಾಮೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ನ ಅಧ್ಯಕ್ಷರಾಗಿದ್ದಾರೆ. ಅನೇಕ ಬಾರಿ ವಿರೋಧ ಪಕ್ಷದವರು ಜನರಿಗೆ ತಪ್ಪು ಮಾಹಿತಿಯನ್ನು ಕೊಡುವಂತಹ ಪ್ರಯತ್ನ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ದೊಡ್ಡ ಬಿರುಕಿದೆ ಅಂತ. ಈ 75ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಕ್ಕೆ ಡಿ.ಕೆ.ಶಿವಕುಮಾರ್ ಅವರ ವಿರೋಧವಿದೆ ಅಂತ ಅಪಪ್ರಚಾರ ಮಾಡಿದ್ರು, ಆದರೆ ನಾನು ಡಿ.ಕೆ.ಶಿವಕುಮಾರ್ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕರ್ನಾಟಕದಲ್ಲಿ ಒಂದು ಭ್ರಷ್ಟ, ಕೋಮುವಾದಿ ಸರ್ಕಾರ ಇದೆ. ಈ ಭ್ರಷ್ಟ, ಕೋಮುವಾದಿ ಸರ್ಕಾರವನ್ನು ಕಿತ್ತೊಗೆದು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಇದೇ ವೇಳೆ ಸಿದ್ದರಾಮಯ್ಯ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz