ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬಿಡಿಎ ವಸತಿ ಯೋಜನೆ ಕಾಮಗಾರಿಗೆ ಗುತ್ತಿಗೆ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಈ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ಈ ಕುರಿತು ನಗರದಲ್ಲಿ ಮಾತನಾಡಿದ ಬಿ. ಎಸ್ ಯಡಿಯೂರಪ್ಪ ಅವರು,ನನಗೆ ನ್ಯಾಯಾಂಗದ ಮೇಲೆ ತುಂಬಾ ವಿಶ್ವಾಸವಿದೆ. ಆದರೆ ನಾನು ಏನು ತಪ್ಪು ಮಾಡಿಲ್ಲ. ಹೀಗಾಗಿ ನನಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ ಹಾಗೂ ಸಚಿವ ಸೋಮಶೇಖರ್, ಶಶಿಧರ್ ಮುರಳಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ ಹಾಗೂ ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy