ತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಶ್ರೀ ನಾರಾಯಣ ದಾಸ್ ಅವರಿಗೆ ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. (ಡಾಕ್ಟರೇಟ್) ಪದವಿ ಲಭಿಸಿದೆ.
ಪ್ರೊಫೆಸರ್ ಕೆ. ನಾಗೇಂದ್ರ ಬಾಬು ಅವರ ಮಾರ್ಗದರ್ಶನದಲ್ಲಿ “ಮಾರ್ಕೆಟಿಂಗ್ ಸ್ಟ್ರಾಟೆಜೀಸ್ ಆಫ್ ಆಯುರ್ವೇದಿಕ್ ಪ್ರಾಡಕ್ಟ್ಸ್ — ಎ ಸ್ಟಡಿ” (Marketing Strategies of Ayurvedic Products — A Study) ಎಂಬ ವಿಷಯದ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಈ ಉನ್ನತ ಗೌರವ ದೊರೆತಿದೆ.
ನಾರಾಯಣ ದಾಸ್ ಅವರ ಈ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ವಿವಿಧ ವಿಭಾಗಗಳ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ಆತ್ಮೀಯವಾಗಿ ಅಭಿನಂದಿಸಿದ್ದಾರೆ.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
