ಬೆಂಗಳೂರು: ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅನುಮತಿ ಕೋರಿ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಶುಕ್ರವಾರ ಪರಿಷತ್ತಿನ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರನ್ನು ಸಂಪರ್ಕಿಸಿದ್ದಾರೆ.
ಹೊರಟ್ಟಿ ಅವರು ಕಚೇರಿಯಲ್ಲಿ ಇಲ್ಲದ ಕಾರಣ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ವಿಧಾನಸೌಧದ ಆಪ್ತ ಕಾರ್ಯದರ್ಶಿಗೆ ನಾರಾಯಣಸ್ವಾಮಿ ಪ್ರಸ್ತಾವನೆ ಸಲ್ಲಿಸಿದರು.
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಇದೇ 21 ರಂದು ‘ತಿರಂಗಾಯಾತ್ರೆ’ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮನ್ನು ಅಕ್ರಮ ಬಂಧನದಲ್ಲಿರಿಸಿ, ಹಲ್ಲೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಸಭಾಪತಿಗೆ ದೂರು ನೀಡಿದ್ದಾರೆ.
ಕಲಬುರಗಿ ಎಸ್ಪಿ ಆಡೂರು ಶ್ರೀನಿವಾಸುಲು ಮತ್ತು ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ್, ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್, ಸಿಪಿಐಗಳಾದ ಚಂದ್ರಶೇಖರ ತಿಗಡಿ, ನಟರಾಜ ಲಾಡಾ ಮತ್ತು ಇತರ ಅಧಿಕಾರಿಗಳು ಮೌನವಾಗಿದ್ದು, ಈ ನಾಚಿಕೆಗೇಡಿನ ಕೃತ್ಯದಲ್ಲಿ ಭಾಗವಹಿಸುವ ಮೂಲಕ, ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಧಕ್ಕೆಯಾಗುವ ರೀತಿಯಲ್ಲಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ” ಎಂದು ಅವರು ಆರೋಪಿಸಿದರು.
ಚಿತ್ತಾಪುರದ ಅತಿಥಿಗೃಹದ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಿಕೊಂಡ ರಾಜಕೀಯ ಪ್ರೇರಿತ ಗೂಂಡಾಗಳು ಜಮಾಯಿಸಿ ನನ್ನನ್ನು ಆರು ಗಂಟೆಗಳ ಕಾಲ ಅಕ್ರಮ ಬಂಧನದಲ್ಲಿ ಇರಿಸಿದ್ದೂ ಅಲ್ಲದೇ ಹಲ್ಲೆಗೆ ಯತ್ನ ನಡೆಸಿದರು. ಆ ಸಂದರ್ಭದಲ್ಲಿ ರಕ್ಷಣೆಗೆ ಧಾವಿಸದ ಪೊಲೀಸರು ನನ್ನ ಹಕ್ಕಿಗೆ ಚ್ಯುತಿ ತಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW