ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ(81) ಇಂದು ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ರುದ್ರಪ್ಪ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಎರಡು ದಿನದ ಹಿಂದೆ ದುನಿಯಾ ವಿಜಯ್, ಅಪ್ಪನನ್ನ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಇಂದು ಬೆಳಗ್ಗೆ 7.30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ರುದ್ರಪ್ಪ ಮೃತಪಟ್ಟಿದ್ದಾರೆ.
ಈ ಸಂಬಂಧ ವಿಜಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಅಪ್ಪನ ಫೋಟೋ ಹಾಕಿ ‘ಮಿಸ್ ಯೂ ಅಪ್ಪ’ ಎಂದು ಬರೆದುಕೊಂಡಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ವಿಜಯ್ ತಂದೆಯ ಅಂತ್ಯಕ್ರಿಯೆ ನಡೆಯಲಿದೆ.
ಕೆಲವು ತಿಂಗಳು ಹಿಂದೆ ದುನಿಯಾ ವಿಜಯ್ ಅವರ ತಾಯಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700