ಹೆಸರಾಂತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅತ್ಯಾಚಾರ ಆರೋಪ ಎದುರಿಸುತ್ತಿರುವ ಹಿನ್ನೆಲೆ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಮಾನತು ಮಾಡಿದೆ.
ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರ ನಿಜವಾದ ಹೆಸರು ಶೇಕ್ ಜಾನಿ ಬಾಷಾ. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಕರಣದಡಿ ಅವರನ್ನು ಸೈಬರಾಬಾದ್ ಪೊಲೀಸರು ಸೆ.19ರಂದು ಗೋವಾದಲ್ಲಿ ಬಂಧಿಸಿದ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಆದರೆ, ಅ.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚಿಗೆ ಮಧ್ಯಂತರ ಜಾಮೀನು ಪಡೆದಿದ್ದರು.
ತಿರುಚಿತ್ರಂಬಲಂ ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಇದೀಗ ಅವರ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q