ತುಮಕೂರು: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 24ರ ಬೆಳಿಗ್ಗೆ 11:30 ಗಂಟೆಗೆ ಶಿರಾ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ರಾಷ್ಟ್ರೀಯ ಗ್ರಾಹಕರ ದಿನಾಚರಣೆ–2024” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಜಿ.ಟಿ. ವಿಜಯಲಕ್ಷ್ಮೀ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಶಿರಾ ತಾಲೂಕಿನ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸದಸ್ಯ ನಿವೇದಿತಾ ರವೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಡಿ. ಚಂದ್ರಶೇಖರಪ್ಪ ಭಾಗವಹಿಸಲಿದ್ದಾರೆ.
ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಗೃತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx