ತುಮಕೂರು: ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಬಗ್ಗೆ ಜನಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 90 ಕಿ.ಮೀ. ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ತುಮಕೂರು ಜಿಲ್ಲೆಯು ಅತೀ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆ ವಿಭಾಗದಲ್ಲಿ ಪ್ರಥಮ ಹಾಗೂ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ದ್ವಿತೀಯ ಸೇರಿ 2 ಪ್ರಶಸ್ತಿಗಳಿಗೆ ಭಾಜನವಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಜಿಲ್ಲೆಗೆ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಂಘ ಸಂಸ್ಥೆ, ಸಾರ್ವಜನಿಕರಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಶಸ್ತಿಯನ್ನು ನವೆಂಬರ್ 26ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಡಾ: ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296