ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ಜಾರಿ ನಿರ್ದೇಶನಾಲಯ ಇಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆ ಒಳಪಡಿಸಿತು.
79 ವರ್ಷದ ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕನಾಗಿರುವ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದರು.
ಈ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಹತ್ವದ ಮಾಹಿತಿ ಸಂಗ್ರಹಿಸಿದರು ಎಂದು ಮೂಲಗಳು ತಿಳಿಸಿವೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಖರ್ಗೆಯವರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ತನಿಖೆ ಪೂರಕವಾಗಿ ಖರ್ಗೆಯವರನ್ನು ಕೆಲವೊಂದು ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ಅವರನ್ನು ವಿಚಾರಣೆಗೆ ಗುರಿಪಡಿಸಲಾಗಿದೆ.
ಫೆ. 26, 2011ರಲ್ಲಿ ಅಸೋಸಿಯೇಟೆಡ್ ಜರ್ನರಲ್ಸ್ ಲಿಮಿಟೆಡ್‌ಗೆ ಸಂಬಂಧಿಸಿದ ಶೇರುಗಳ ಸ್ವಾಧೀನ ಪ್ರಕರಣದಲ್ಲಿ ವಿವಾದ ಉಂಟಾಗಿದೆ. ನ. 20 ಅಸೋಸಿಯೇಟೆಡ್ ಜರ್ನರಲ್ಸ್ ಲಿಮಿಟೆಡ್ ಸಾರ್ವಜನಿಕ ಲಿಮಿಟೆಡ್ ಕಂಪನಿಯಾಗಿತ್ತು. 1937ರ ಭಾರತೀಯರ ಕಂಪನಿಗಳ ಕಾಯ್ದೆಯಡಿ ಲಿಮಿಟೆಡ್ ಕಂಪನಿಯಾಗಿತ್ತು.
ವಿವಿಧ ಭಾಷೆಗಳಲ್ಲಿ ಪತ್ರಿಕೆಗಳನ್ನು ಮುದ್ರಿಸಲು ನ್ಯಾಷನಲ್ ಹೆರಾಲ್ಡ್ ಇಂಗ್ಲಿಷ್ ಮತ್ತು ನವಜೀವನ್ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ಹಾಗೂ ಉರ್ದುವಿನಲ್ಲಿ ಖ್ವಾಮಿ ಆವಾಜ್ ಪತ್ರಿಕೆ ಮುದ್ರಣವಾಗುತ್ತಿತ್ತು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5