ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ರಾಷ್ಟ್ರೀಯ ಕಾನೂನು ಸೇವೆಗಳ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಜಯಂತ್ ಕುಮಾರ್ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಗೌರವಾನ್ವಿತ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹೆಚ್. ಅನಂತ, ಕೌಟುಂಬಿಕ ನ್ಯಾಯಾಲಯದ ಗೌರವಾನ್ವಿತ ಪ್ರಧಾನ ನ್ಯಾಯಾಧೀಶರಾದ ಮುನಿರಾಜು ಎನ್., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q