ಔರಾದ: ಯೋಗ ಕ್ಷೇತ್ರದಲ್ಲಿ ಬೀದರ ಜಿಲ್ಲೆಯ ಯುವಕನೊಬ್ಬ ವಿಶಿಷ್ಟ ಸಾಧನೆ ಮಾಡಿದ್ದು, ಜಿಲ್ಲೆಯ ಕ್ರೀಡಾ ವಲಯಕ್ಕೆ ಮತ್ತೊಂದು ಗೌರವ ತಂದಿದ್ದಾನೆ. ಯೋಗ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ ರಾಷ್ಟ್ರಮಟ್ಟದ ಯೋಗ ತೀರ್ಪುಗಾರರ ಪರೀಕ್ಷೆಯಲ್ಲಿ ಸಂದೀಪ ಸಾದುರೆ ಅವರು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ರಾಷ್ಟ್ರೀಯ ಮಟ್ಟದ ಯೋಗ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ.
ಔರಾದ ತಾಲೂಕಿನ ಮಹಾರಾಜವಾಡಿ ಗ್ರಾಮದ ನಿವಾಸಿಯಾಗಿರುವ ಸಂದೀಪ ಸಾದುರೆ ಅವರು ಶಿಕ್ಷಣದ ಜೊತೆಗೆ ಯೋಗಾಸನದಲ್ಲಿ ಆಸಕ್ತಿ ಹೊಂದಿದ ಇವರು ವಿವಿಧ ಹಂತಗಳಲ್ಲಿ ತರಬೇತಿ ಪಡೆದು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ.
ಯೋಗದ ತಾಂತ್ರಿಕ ಅಂಶಗಳು, ನಿಯಮಾವಳಿ, ತೀರ್ಪುಗಾರಿಕೆ ವಿಧಾನಗಳು ಸೇರಿದಂತೆ ವಿವಿಧ ವಿಷಯಗಳಲ್ಲಿ ಸಮಗ್ರ ತಿಳುವಳಿಕೆ ಹೊಂದಿರುವುದರಿಂದ ಅವರು ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವುದು ಗಮನಾರ್ಹವಾಗಿದೆ.
ಈ ಆಯ್ಕೆಯ ಮೂಲಕ ಸಂದೀಪ ಸಾದುರೆ ಅವರಿಗೆ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ನಡೆಯುವ ಯೋಗಾಸನ ಸ್ಪರ್ಧೆಗಳಲ್ಲಿ ತೀರ್ಪುಗಾರರಾಗಿ ಕಾರ್ಯನಿರ್ವಹಿಸುವ ಅವಕಾಶ ದೊರಕಿದೆ. ಇದರಿಂದಾಗಿ ಜಿಲ್ಲೆಯ ಯುವಜನತೆಗೆ ಯೋಗ ಕ್ಷೇತ್ರದಲ್ಲಿ ಮತ್ತಷ್ಟು ಪ್ರೇರಣೆ ದೊರಕುವ ಸಾಧ್ಯತೆ ಇದೆ ಎಂದು ಕ್ರೀಡಾಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಯೋಗ ಫೆಡರೇಶನ್ ಆಫ್ ಇಂಡಿಯಾ ನಡೆಸುವ ಈ ತೀರ್ಪುಗಾರರ ಪರೀಕ್ಷೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಭಾಗವಹಿಸಿದ ಅಭ್ಯರ್ಥಿಗಳ ನಡುವೆ ಸಂದೀಪ ಸಾದುರೆ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿರುವುದು ಗಮನಾರ್ಹ ಸಾಧನೆ ಎನ್ನಲಾಗಿದೆ.
ಯೋಗಾಸನಗಳ ತಂತ್ರಜ್ಞಾನ, ನೈಪುಣ್ಯ ಹಾಗೂ ನ್ಯಾಯಯುತ ಮೌಲ್ಯಮಾಪನದ ಬಗ್ಗೆ ಅವರ ತಿಳುವಳಿಕೆ ಈ ಸಾಧನೆಗೆ ಕಾರಣವಾಗಿದೆ ಎಂದು ಯೋಗ ತರಬೇತುದಾರರು ತಿಳಿಸಿದ್ದಾರೆ.
ಜಿಲ್ಲೆಯ ಕ್ರೀಡಾ ವಲಯದಲ್ಲಿ ಯೋಗಾಸನಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯುತ್ತಿರುವ ಈ ಸಂದರ್ಭದಲ್ಲಿ ಸಂದೀಪ ಸಾದುರೆ ಅವರ ಆಯ್ಕೆ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವಂತಾಗಿದೆ. ಯುವಕರು ಯೋಗದತ್ತ ಮುಖ ಮಾಡುವಂತೆ ಪ್ರೇರೇಪಿಸುವಲ್ಲಿ ಈ ಸಾಧನೆ ಸಹಕಾರಿಯಾಗಲಿದೆ ಎಂದು ಕ್ರೀಡಾಭಿಮಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಂದೀಪ ಸಾದುರೆ ಅವರ ಸಾಧನೆಗೆ ಜಿಲ್ಲೆಯ ವಿವಿಧ ಕ್ರೀಡಾ ಸಂಘಟನೆಗಳು, ಯೋಗಾಸಕ್ತರು, ಸ್ನೇಹಿತರು ಹಾಗೂ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಭವಿಷ್ಯದಲ್ಲಿ ಅವರು ಇನ್ನಷ್ಟು ಸಾಧನೆ ಮಾಡಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಶುಭಹಾರೈಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


