nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ

    July 16, 2026

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ
    ಕೊರಟಗೆರೆ August 23, 2025

    ಸೆ.13ರಂದು ರಾಷ್ಟ್ರೀಯ ಲೋಕಾ ಅದಾಲತ್ 2025: ಸಂಧಾನದ ಮೂಲಕ ವ್ಯಾಜ್ಯಗಳ ಇತ್ಯರ್ಥ: ನ್ಯಾಯಾಧೀಶೆ ನೂರುನ್ನೀಸ

    By adminAugust 23, 2025No Comments2 Mins Read
    nurunnisa

    ಕೊರಟಗೆರೆ: ರಾಷ್ಟ್ರೀಯ ಲೋಕಾ ಅದಾಲತ್ ವರ್ಷಕ್ಕೆ 4 ಬಾರಿ ನಡೆಸಲಾಗುತ್ತದೆ. ಸೆ.13ರಂದು ನಡೆಯುತ್ತಿರುವ ರಾಷ್ಟ್ರೀಯ ಲೋಕಾ ಅದಾಲತ್ 2025ರ ಮೂರನೇ ಅದಾಲತ್ ಆಗಿದೆ, ಈ ಅದಾಲತ್ ತುಮಕೂರಿನಲ್ಲಿ ಮಾತ್ರವಲ್ಲ ರಾಷ್ಟ್ರ ವ್ಯಾಪ್ತಿಯಲ್ಲಿ ನಡೆಯುತ್ತದೆ ಎಂದು ತುಮಕೂರಿನ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸ ತಿಳಿಸಿದರು.

    ಪಟ್ಟಣದ ಜೆಎಂಎಫ್‌ ಸಿ ನ್ಯಾಯಾಲಯದಲ್ಲಿ ತುಮಕೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಲೋಕ ಅದಾಲತ್, ಮಧ್ಯಸ್ಥಿಕೆ ಖಾಯಂ ಜನತಾ ನ್ಯಾಯಲಯ ವ್ಯವಸ್ಥೆ ಮೂಲಕ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥ ಮಾಡಿಕೊಳ್ಳಬಹುದು ಎಂದರು.

    ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ವಿದ್ಯುತ್, ಕಳ್ಳತನ, ರಾಜಿ ಆಗಬಲ್ಲ ಅಪರಾಧ, ವೈವಾಹಿಕ, ಸಿವಿಲ್, ರಿಯಲ್ ಎಸ್ಟೇಟ್ ಹಾಗೂ ಜಿಲ್ಲಾ ಗ್ರಾಹಕರ ಪ್ರಕರಣಗಳನ್ನು ಅದಾಲತ್‌ ನಲ್ಲಿ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

    ‘ಅದಾಲತ್‌ನಿಂದ ನ್ಯಾಯಾಲಯದ ಮೇಲಿನ ಹೊರೆ ಕಡಿಮೆಯಾಗುತ್ತದೆ. ತುಮಕೂರು ಜಿಲ್ಲೆಯ ಸುಮಾರು 50 ಕೋರ್ಟ್ ಗಳಲ್ಲಿ ನಡೆಯುತ್ತಿದೆ. ಅದಾಲತ್‌ ನಿಂದ ನ್ಯಾಯಾಲಯದ ಕುರಿತು ಜನರ ಮನೋಭಾವನೆ ಬದಲಾಗಲು ಅವಕಾಶವಿದೆ. ಇದರಿಂದ ಜನರಿಗೆ ಆಗುವ ಲಾಭಗಳ ಕುರಿತು ಜಾಗೃತಿ ಮೂಡಿಸಿ ಉಚಿತ ಕಾನೂನು ನೆರವು ನೀಡಲಾಗುತ್ತದೆ ಎಂದು ಹೇಳಿದರು.

    ಕೊರಟಗೆರೆ ಜೆಎಂಎಫ್‌ ಸಿ ನ್ಯಾಯಾಲಯದ ನ್ಯಾಯಾಧೀಶ  ಹರೀಶ್‌ ಕುಮಾರ್ ಮಾತನಾಡಿ,  ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೆರೆಗೆ ಲೋಕಾ ಅದಾಲತ್‌ನಲ್ಲಿ ಕಕ್ಷಿದಾರರಿಗೆ ಕಾನೂನು ಅರಿವು ಮೂಲಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಯಾವ ರೀತಿ ರೂಪುರೇಷೆಗಳನ್ನು ಸಿದ್ದತೆ ಮಾಡಿಕೊಂಡಿದ್ದು, ರಾಜೀ ಸಂಧಾನದಿಂದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಸಂಬಂಧ ಮತ್ತು ಸಮಯವನ್ನು ಕಕ್ಷಿದಾರರು ಉಳಿಸಿಕೊಳ್ಳಬಹುದು ಎಂದು ಹೇಳಿದರು.

    ಎಲ್ಲಿಯವರೆಗೂ ಮನುಷ್ಯ ಇರುತ್ತಾನೋ ಅಲ್ಲಿಯವರೆಗೆ ವ್ಯಾಜ್ಯಗಳಿರುತ್ತವೆ. ಆದರೆ ಕಕ್ಷಿದಾರರು ಆದಷ್ಟು ಕೋರ್ಟಿಗೆ ಬರುವುದನ್ನು ಕಡಿಮೆ ಮಾಡಬೇಕು. ಬಹಳಷ್ಟು ವ್ಯಾಜ್ಯಗಳನ್ನು ನಮ್ಮಲ್ಲೇ ಇತ್ಯರ್ಥಪಡಿಸಿಕೊಳ್ಳಬಹುದು. ಮಧ್ಯಸ್ಥಿಕೆ ವಹಿಸುವ ಮೂಲಕ, ರಾಜೀ ಮಾಡುವ ಮೂಲಕ, ಅನೇಕ ಸಮಸ್ಯೆಗಳು, ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.

    ಈ ವೇಳೆ ಮಧುಗಿರಿ ಮತ್ತು ಕೊರಟಗೆರೆ ನ್ಯಾಯಧೀಶೆ ಪ್ರಮೀಳಾ, ವಕೀಲರ ಸಂಘದ ಅಧ್ಯಕ್ಷ ಎಂ.ಎಲ್ ಸಂತೋಷ್, ಕಾರ್ಯದರ್ಶಿ ಮಂಜುನಾಥ್, ಹಿರಿಯ ವಕೀಲ ಟಿ.ಕೃಷ್ಣಮೂರ್ತಿ, ಬಿ.ಎಲ್.ನಾಗರಾಜು, ಎಂ.ಸಿ ಮಲ್ಲಿಕಾರ್ಜುನಯ್ಯ, ಸಂತೋಷ್, ಜಿ.ಎಂ.ಕೃಷಮೂರ್ತಿ, ಬಿ.ಎ ಪುಟ್ಟರಾಜಯ್ಯ, ಶಿವರಾಮಯ್ಯ, ಎಸ್, ಸಂಜೀವರಾಜು, ಹುಸೇನ್‌ಪಾಷ ಸೇರಿದಂತೆ ಇತರರು ಇದ್ದರು.

    ಮನೆ ಮನೆಗೆ ನ್ಯಾಯ:

    ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಗ್ರಾಮೀಣ ಭಾಗದ ಜನರಿಗೆ ಕಾನೂನು ವಿದ್ಯಾರ್ಥಿಗಳು ಮತ್ತು ವಕೀಲರ ಸಂಘದಿಂದ ಕಾನೂನು ಬಗ್ಗೆ ಅರಿವು ಮೂಡಿಸಿ ಕಾನೂನಿನ ಸಲಹೆ ನೀಡಿ ಸರ್ಕಾರದ ಯೋಜನೆಗಳನ್ನು ತಲುಪಿಸಿ ಮನೆ ಮನೆಗೆ ನ್ಯಾಯ ಒದಗಿಸುವ ಉದ್ದೇಶ ಹೊಂದಿದೆ ನ್ಯಾಯಾಧೀಶೆ ನೂರುನ್ನೀಸ ತಿಳಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ

    July 16, 2026

    ತುಮಕೂರು : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಮಾರಾಟ, ಮನೆ ಕಳ್ಳತನ, ಬೋರ್ವೆಲ್ ಸ್ಟಾರ್ಟರ್ ಕಳ್ಳತನ…

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.