nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಈ ವಿಚಾರಗಳ ಬಗ್ಗೆ ನೀವು ತಿಳಿಯಲೇ ಬೇಕು!
    ಲೇಖನ February 7, 2023

    ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಈ ವಿಚಾರಗಳ ಬಗ್ಗೆ ನೀವು ತಿಳಿಯಲೇ ಬೇಕು!

    By adminFebruary 7, 2023No Comments2 Mins Read
    g s shivarudrappa

    ಗೋವಿಂದ ಪೈ, ಕುವೆಂಪು ಅವರ ಬಳಿಕ ರಾಷ್ಟ್ರಕವಿ ಗೌರವಕ್ಕೆ ಪಾತ್ರರಾದ ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ(ಜಿ.ಎಸ್.ಶಿವರುದ್ರಪ್ಪ) ಅವರು  07-02-1926 ರಂದು  ಶಿವಮೊಗ್ಗದ ಶಿಕಾರಿಪುರದ ಈಸೂರಿನಲ್ಲಿ ಜನಿಸಿದರು.

    ನವೆಂಬರ್ 1, 2006ರಂದು ಕವಿ ಜಿ.ಎಸ್.ಶಿವರುದ್ರಪ್ಪ ಅವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು.


    Provided by
    Provided by

    ತಮ್ಮ ತಂದೆಯಿಂದ ಸಾಹಿತ್ಯದ ಆಸಕ್ತಿ ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (1949) ಪದವಿ ಪಡೆದರು.

    ಜಿ.ಎಸ್.ಶಿವರುದ್ರಪ್ಪ ಅವರ ಕವನಗಳು:

    ಸಾಮಗಾನ, ಚೆಲುವು-ಒಲವು, ದೇವಶಿಲ್ಪ,ದೀಪದ ಹೆಜ್ಜೆ, ಕಾರ್ತಿಕ, ಅನಾವರಣ, ತೆರೆದ ದಾರಿ, ಗೋಡೆ, ಕಾಡಿನ ಕತ್ತಲಲ್ಲಿ, ಪ್ರೀತಿ ಇಲ್ಲದ ಮೇಲೆ, ಚಕ್ರಗತಿ, ವ್ಯಕ್ತಮಧ್ಯ, ಅಗ್ನಿಪರ್ವ, ತೀರ್ಥವಾಣಿ, ಜಾರಿದ ಹೊವು,ಸಮಗ್ರ ಕಾವ್ಯ, ಎದೆತುಂಬಿ ಹಾಡಿದೆನು ಮೇರಾ ದಿಯಾ ಮತ್ತು ಇತರ ಕವನಗಳು

    ವಿಮರ್ಶೆಗಳು:

    ಪರಿಶೀಲನ, ವಿಮರ್ಶೆಯ ಪೂರ್ವ ಪಶ್ಚಿಮ, ಸೌಂದರ್ಯ ಸಮೀಕ್ಷೆ. (ಇದು ಅವರ ಪಿಹೆಚ್‌ಡಿ ಮಹಾ ಪ್ರಬಂಧ), ಕಾವ್ಯಾರ್ಥ ಚಿಂತನ, ಗತಿಬಿಂಬ, ಅನುರಣನ, ಪ್ರತಿಕ್ರಿಯೆ, ಕನ್ನಡ ಸಾಹಿತ್ಯ ಸಮೀಕ್ಷೆ, ಮಹಾಕಾವ್ಯ ಸ್ವರೂಪ,ಕನ್ನಡ ಕವಿಗಳ ಕಾವ್ಯ ಕಲ್ಪನೆ, ಹೊಸಗನ್ನಡ ಕವಿತೆಗಳಲ್ಲಿ ಕಾವ್ಯ ಚಿಂತನ, ಕುವೆಂಪು ಪುನರವಲೋಕನ, ಸಮಗ್ರ ಗದ್ಯ ಭಾಗ 1,2 ಮತ್ತು 3, ಬೆಡಗು, ನವೋದಯ-ಕುವೆಂಪು-ಒಂದು ಪುನರ್ವಿಮರ್ಶೆ – ಕರ್ನಾಟಕ ಸರ್ಕಾರಕ್ಕೆ ಕುವೆಂಪು ಮೇಲೆ ಜೀವನಚರಿತ್ರೆಯ ಕೆಲಸ.

    ಪ್ರವಾಸ ಕಥನಗಳು:

    ಮಾಸ್ಕೋದಲ್ಲಿ 22 ದಿನ -(ಸೋವಿಯತ್‌ ಲ್ಯಾಂಡ್ ನೆಹರೂ ಪ್ರಶಸ್ತಿ ಬಂದಿದೆ), ಇಂಗ್ಲೆಂಡಿನಲ್ಲಿ ಚತುರ್ಮಾಸ, ಅಮೆರಿಕದಲ್ಲಿ ಕನ್ನಡಿಗ, ಗಂಗೆಯ ಶಿಖರಗಳಲ್ಲಿ.

    ಜಿ.ಎಸ್.ಶಿವರುದ್ರಪ್ಪ  ಅವರು ಕರ್ಮಯೋಗಿ (ಸಿದ್ದರಾಮನ ಜೀವನ ಚರಿತ್ರೆ) ಜೀವನ ಚರಿತ್ರೆ  ರಚಿಸಿದ್ದಾರೆ.

    1955ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಡಾ.ಜಿ.ಎಸ್.ಶಿವರುದ್ರಪ್ಪ ನವರು ಮೈಸೂರು ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    1963ರ ನವೆಂಬರ್‌ ನಿಂದ 2 ವರ್ಷಗಳ ಕಾಲ ಹೈದರಾಬಾದಿನ ಉಸ್ಮಾನಿಯಾ ವಿಶ್ವ ವಿದ್ಯಾಲಯದಲ್ಲಿ ಕನ್ನಡ ವಿಭಾಗದ ಉಪ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. 1971ರ ನವೆಂಬರಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾದ ಅವರು, ಮುಂದೆ ಅದು “ಕನ್ನಡ ಅಧ್ಯಯನ ಕೇಂದ್ರ” ವಾಗಿ ಪರಿವರ್ತಿತವಾದಾಗ, ಅದರ ನಿರ್ದೇಶಕರೂ ಆದರು.

    ಹಸ್ತಪ್ರತಿಗಳ ಸಂಗ್ರಹಣೆ, ಅವುಗಳ ರಕ್ಷಣೆಗಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದ ಶಿವರುದ್ರಪ್ಪನವರು 1971ರಲ್ಲಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ‘ಹಸ್ತಪ್ರತಿ ವಿಭಾಗ’ ವನ್ನು ಪ್ರಾರಂಭಿಸಿದರು. ಕೇವಲ 4 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಓಲೆಗರಿಯ ಹಾಗೂ 1000ಕ್ಕೂ ಹೆಚ್ಚು ಕಾಗದದ ಹಸ್ತ ಪ್ರತಿಗಳ ಸಂಗ್ರಹಣೆಯಾಯಿತು. ತಾವು ಓದಿದ ಮೈಸೂರು ವಿಶ್ವವಿದ್ಯಾನಿಲಯದಲ್ಲೇ 1949ರಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಆರಂಭಿಸಿದರು.

    1963ರಲ್ಲಿ ಹೈದರಾಬಾದಿನ ಉಸ್ಮಾನಿಯಾ ವಿಶ್ವವಿದ್ಯಾಲಯದ ಆಹ್ವಾನದ ಮೇರೆಗೆ ರೀಡರ್ ಮತ್ತು ಕನ್ನಡ ವಿಭಾಗದ ಮುಖ್ಯಸ್ಥರಾಗಿ 1966ರವರೆವಿಗೂ ಅಲ್ಲಿ ಸೇವೆ ಸಲ್ಲಿಸಿದರು. 1966 ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕ ಹಾಗೂ ನಿರ್ದೇಶಕರಾಗಿ ಆಯ್ಕೆಯಾಗಿ 1987ರವರೆವಿಗೂ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸೇವೆ ಸಲ್ಲಿಸಿದರು. ಅವರ ಕಾಲದಲ್ಲೇ ಕನ್ನಡ ವಿಭಾಗವು ಕನ್ನಡ ಅಧ್ಯಯನ ಕೇಂದ್ರವಾಯಿತು.

    ನಿವೃತ್ತಿಯ ನಂತರವೂ ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕುವೆಂಪು ಪೀಠ ದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ, ರಾಜ್ಯ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ದುಡಿದಿದ್ದಾರೆ. ದೆಹಲಿಯ ರಾಷ್ಟ್ರೀಯ ಕವಿ ಸಮ್ಮೇಳನ, ತುಮಕೂರಿನ ಸಾಹಿತ್ಯ ಸಮ್ಮೇಳನ ದ ಕವಿಗೋಷ್ಠಿಯ ಅಧ್ಯಕ್ಷರಾಗಿ, ಮದರಾಸಿನ ಕನ್ನಡ ಸಮ್ಮೇಳನ ದ ಅಧ್ಯಕ್ಷರಾಗಿ, 1992 ರಲ್ಲಿ ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಗೌರವಿಸಲ್ಪಟ್ಟಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !

    November 2, 2025

    ‘ನಮ್ಮ ತುಮಕೂರು’ ನಂಬಿಕೆಯ ಬೆಳಕು: 4ನೇ ವಾರ್ಷಿಕೋತ್ಸವದ ಶುಭಾಶಯಗಳು | ಆರ್.ಶೋಭಾ

    November 1, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ  ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ…

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.