ಬೀದರ್: ರಸ್ತೆ ಅಪಘಾತದಿಂದ ಸಂಭವಿಸುವ ಅಮಾಯಕರ ಪ್ರಾಣ ರಕ್ಷಣೆ ಮಾಡುವುದು ಮತ್ತು ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂತಪೂರ ಪೊಲೀಸರು ರಾಷ್ಟ್ರೀಯ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮ ಆಯೋಜಿಸಿದರು.
ಪೊಲೀಸ್ ವರಿಷ್ಠಾಧಿಕಾರಿಗಳಾದ ಐ.ಪಿ.ಎಸ್. ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಸಂತಪೂರ ಪೊಲೀಸ್ ಠಾಣೆಯ ಪಿಎಸ್ ಐ ನಂದಕುಮಾರ ಅವರ ನೇತೃತ್ವದಲ್ಲಿ ಪೊಲೀಸರು ಸಾರ್ವಜನಿಕರಿಗೆ Save yourself to save your family always wear helmet & seat belt ಎಂಬ ವಾಕ್ಯದೊಂದಿಗೆ ಜಾಗೃತಿ ಮೂಡಿಸಿದರು.
ಜನ ಸಾಮಾನ್ಯರ ಪ್ರಾಣ ರಕ್ಷಣೆ ಮತ್ತು ಅಪರಾಧ ತಡೆಯುವುದು, ನಡೆಯದಂತೆ ನಿಗಾ ವಹಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ , ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx