ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯ ಬಂಧನವಾಗಿದ್ದು ,ಹಲವು ದಿನಗಳಿಂದ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಮೇಶ್ ಕಿಟ್ಟಿ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.
ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ , ಸುದೀಪ್ ಚಾರಿಟಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದ್ದರು. ಸುದೀಪ್ ಮತ್ತು ರಮೇಶ್ ನಡುವಿನ ಹಣಕಾಸು ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
ಹಣಕಾಸಿನ ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ಸ್ವತಃ ರಮೇಶ್ ಕಿಟ್ಟಿನೇ ಒಪ್ಪಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಅಲ್ಲದೇ, ಈ ಪ್ರಕರಣದ ಹಿಂದೆ ಇನ್ನೂ ಹಲವರು ಇದ್ದಾರೆಂದು ಶಂಕಿಸಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


