2008ರ ನವೆಂಬರ್ 7ರಂದು ಮೊದಲ ಬಾರಿಗೆ ಚಿತ್ರ ತೆರೆಕಂಡಿದ್ದ ನಟ ದರ್ಶನ್ ಅಭಿನಯದ ‘ನವಗ್ರಹ’ ಚಿತ್ರ ನ. 8 ರಂದು ಮರು ಬಿಡುಗಡೆಯಾಗಲಿದೆ.
ಮೀನಾ ತೂಗುದೀಪ ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ದಿನಕರ್ ತೂಗುದೀಪ ನಿರ್ದೇಶದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ. ಭರ್ಜರಿ ಯಶಸ್ಸು ಕಂಡಿದ್ದ ಈ ಚಿತ್ರ ಮತ್ತೊಮ್ಮೆ ತೆರೆ ಕಾಣುತ್ತಿರುವುದು ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.
ನನ್ನ ನಿರ್ದೇಶನದ 2ನೇ ಚಿತ್ರ ‘ನವಗ್ರಹ’, ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳ್ಳಿತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8 ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ ಎಂದು ದಿನಕರ್ ತೂಗುದೀಪ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296