ಪಟಿಯಾಲ: 1988 ರ ರೋಡ್ ರೇಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಸೋಮವಾರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸಿಧು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಭಾರೀ ಭದ್ರತೆಯಲ್ಲಿ ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ನವಜೋತ್ ಸಿಧು ಜೈಲಿನಲ್ಲಿ ವಿಶೇಷ ಆಹಾರಕ್ರಮವನ್ನು ಬಯಸಿದ್ದಾರೆ ಎಂದು ಕ್ರಿಕೆಟಿಗ-ರಾಜಕಾರಣಿಯ ವಕೀಲ ಎಚ್ ಪಿಎಸ್ ವರ್ಮಾ ಅವರು ಹೇಳಿದ್ದಾರೆ. ವೈದ್ಯರ ತಂಡ ಆಸ್ಪತ್ರೆಯಲ್ಲಿ ನವಜೋತ್ ಸಿಧು ಅವರ ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ನಡೆಸುತ್ತದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5