ಛತ್ತೀಸ್ ಗಢದಲ್ಲಿ ನಕ್ಸಲರ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಇಬ್ಬರು ಐಟಿಬಿಪಿ ಜವಾನರು ಸಾವನ್ನಪ್ಪಿದ್ದಾರೆ. ಬಿಂದ್ರನವಗಡದಲ್ಲಿ ಮತಗಟ್ಟೆ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.
ಜಾರ್ಖಂಡ್ ನಲ್ಲಿ ಮಾವೋವಾದಿಗಳ ದಾಳಿಯಲ್ಲಿ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಚೈಬಾಸಾದಲ್ಲಿ ಐಇಡಿ ಸ್ಫೋಟ ಸಂಭವಿಸಿದೆ. ಗಾಯಗೊಂಡ ಇಬ್ಬರನ್ನು ರಾಂಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.


