ತುಮಕೂರು: ತುಮಕೂರು ಗ್ರಾಮಾಂತರ ಊರ್ಡಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ನಾಯಕನ ಕೆರೆ ಈ ಬಾರಿ ನಿರಂತರವಾಗಿ ಸುರಿದ ಮಳೆಗೆ ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕರಾದ ಡಿ.ಸಿ.ಗೌರಿಶಂಕರ್ ಅವರು ಗಂಗಾ ಪೂಜೆ ನೆರವೇರಿಸಿದರು.
ಗಂಗಾಪೂಜೆ ಸಲ್ಲಿಸಿ, ಕೆರೆಗೆ ಬಾಗಿನ ಅರ್ಪಿಸಿದ ಶಾಸಕರು, ಪೂಜೆಯಲ್ಲಿ ಭಾಗವಹಿಸಿದ್ದ ಸುಮಾರು 400ಕ್ಕೂ ಅಧಿಕ ಹೆಣ್ಣು ಮಕ್ಕಳಿಗೆ ಅರಿಶಿಣ, ಕುಂಕುಮ, ಬಳೆ ನೀಡಿದರು.
ಇದೇ ವೇಳೆ ಸ್ಥಳೀಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಮದುವೆ ಕಾರ್ಯಗಳಿಗೆ ಮತ್ತು ಆರೋಗ್ಯ ಸಮಸ್ಯೆ ಇನ್ನಿತರ ಸಮಸ್ಯೆ ಉಳ್ಳವರಿಗೆ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700