ನಾಯಿಗೆ ಊಟ ಕೊಡಲಿಲ್ಲ ಅಂತ 21 ವರ್ಷದ ಸಂಬಂಧಿಯನ್ನೇ ವ್ಯಕ್ತಿಯೊಬ್ಬ ಕೊಂದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
ಪಾಲಕ್ಕಾಡ್ ಜಿಲ್ಲೆಯ ಮುಲಯಂಕಾವು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 21 ವರ್ಷದ ಹರ್ಷದ್ ಮೃತಪಟ್ಟ ದುರ್ದೈವಿ. ಸಂಬಂಧ ಹಕೀಂ (27) ಕೊಲೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಹೊಡೆದು ಹಲ್ಲೆ ಮಾಡಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಹಕೀಂ ಹಾಗೂ ಸ್ನೇಹಿತರು ಆಸ್ಪತ್ರೆಗೆ ದಾಖಲಿಸಿದ್ದು, ಮಹಡಿ ಮೇಲಿಂದ ಬಿದ್ದಿದ್ದಾನೆ. ನಾವಿಬ್ಬರು ಕೇಬಲ್ ವರ್ಕ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದ್ದರು.
ಹರ್ಷದ್ ಚಿಕಿತ್ಸೆಗೆ ಮುಂದಾದ ವೈದ್ಯರು ಹಲ್ಲೆ ನಡೆದಿದ್ದರಿಂದ ಮೂಳೆ ಮುರಿದಿದ್ದರಿಂದ ದೇಹದೊಳಗೆ ರಕ್ತಸ್ರಾವ ಆಗಿ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಹರ್ಷದ್ ಮೃತಪಟ್ಟಿದ್ದಾನೆ. ನಂತರ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy