ಲೋಕಸಭಾ ಚುನಾವಣೆಯ ಮತ ಎಣಿಕೆಯ ದಿನವಾದ ಜೂನ್ 4 ರಂದು ಆಡಳಿತರೂಢ ಎನ್ ಡಿಎ ಒಕ್ಕೂಟ ಮಧ್ಯಾಹ್ನ 12:30ರ ವೇಳೆಗೆ 400 ಸ್ಥಾನಗಳ ಗಡಿಯನ್ನು ದಾಟಿರುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯು 2019ರ ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ಉತ್ತಮ ಸಾಧನೆ ಮಾಡಿದೆಯೋ ಅದೇ ರೀತಿಯ ಫಲಿತಾಂಶ ಮಹಾರಾಷ್ಟ್ರ, ದೆಹಲಿ, ಕರ್ನಾಟಕ, ಮಧ್ಯಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಗುಜರಾತ್‌ನಲ್ಲಿ ಪುನರಾವರ್ತನೆಯಾಗಲಿದೆ ಎಂದರು.
ಪಶ್ಚಿಮ ಬಂಗಾಳದಲ್ಲಿ ಕನಿಷ್ಟ 30 ಸ್ಥಾನಗಳನ್ನು ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು. ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಸ್ಪರ್ಧೆ ಇರುವುದನ್ನು ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಕೇರಳ ಮತ್ತು ತಮಿಳುನಾಡಿನಲ್ಲಿ ನಾವು ಖಾತೆ ತೆರೆಯಲಿದ್ದೇವೆ. ದಕ್ಷಿಣದ ನಾಲ್ಕು ರಾಜ್ಯಗಳಲ್ಲಿ ನಾವು ಕಾಂಗ್ರೆಸ್ ಗಿಂತ ಮುಂದಿದ್ದೇವೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA