ಸಂವಿಧಾನ ದಿನಾಚರಣೆಯ ಅಂಗವಾಗಿ ಮಲ್ಲೇಶ್ವರದ ಯಶವಂತಪುರದಲ್ಲಿರುವ ಸಂವಿಧಾನ ವೃತ್ತದ ಬಳಿ ಇರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಶಾಸಕ ಅಶ್ವಥ್ ನಾರಾಯಣ ಮಾಲಾರ್ಪಣೆ ಮಾಡಿದರು. ಇದೇ ವೇಳೆ, ನೆರೆದಿದ್ದ ಜನತೆಯೊಂದಿಗೆ ಸಂವಿಧಾನದ ಮಹತ್ವದ ಕುರಿತು ವಿಶೇಷ ಮಾಹಿತಿ ಹಂಚಿಕೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಜಿ ವಿಧಾನಸಭಾ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಎಲ್ಲರಿಗೂ ಹೃತ್ತೂರ್ವಕ ಧನ್ಯವಾದ ತಿಳಿಸಿದರು.
ಬೆಂಗಳೂರಿನ ಯಶವಂತಪುರ ಸಂವಿಧಾನ ವೃತ್ತದ ಬಳಿ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಹಿತ ಸಂವಿಧಾನ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಆಧುನಿಕ ಭಾರತದ ಕನಸು ಕಂಡ ಎಲ್ಲರನ್ನು ಗೌರವಪೂರ್ವಕವಾಗಿ ಸ್ಮರಿಸೋಣ ಎಂದು ಕರೆ ನೀಡಿದರು.


