ಬೆಂಗಳೂರು: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಗೊಂದಲ ಸೃಷ್ಟಿಸಲು ಬಯಸುವವರಿಗೆ ಎಚ್ಚರಿಕೆ ನೀಡಿದ್ದೇವೆ. ಭದ್ರತೆಗಾಗಿ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಹೊಸ ವರ್ಷವನ್ನು ಸಂತೋಷದಿಂದ ಆಚರಿಸಿ. ನಿಮ್ಮ ಹೊಸ ವರ್ಷವು ಅತ್ಯಂತ ಸಂತೋಷದಾಯಕವಾಗಿರಲಿ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx