ಯಾದಗಿರಿ: ಶಾಲೆಯ ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸುವಲ್ಲಿಯೂ ಯಾದಗಿರಿ ಜಿಲ್ಲಾಡಳಿತ ವಿಫಲವಾಗಿದ್ದು, ನೀರಿಗಾಗಿ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಹುಣಸಗಿ ತಾಲೂಕಿನ ಕನಗೊಂಡನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆಗೆ ಇದು ಕೈಗನ್ನಡಿಯಂತಿದೆ. ಶಾಲೆಯಲ್ಲಿ ಬಿಸಿಯೂಟ ಮಾಡಿದ ಬಳಿಕ ಮಕ್ಕಳು, ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇಲ್ಲಿದೆ.
ವಿದ್ಯಾರ್ಥಿಗಳಿಗೆ ಕನಿಷ್ಟ ಸೌಲಭ್ಯ ಒದಗಿಸಲು ಸಹ ಶಿಕ್ಷಣ ಇಲಾಖೆ ವಿಫಲವಾಗಿದೆ. ಶಾಲೆಯಿಂದ ಒಂದು ಕಿಲೋ ಮೀಟರ್ ದೂರದಲ್ಲಿ ಬೋರವೆಲ್ ಇದೆ. ಮಕ್ಕಳು ನೀರು ಬೇಕಾದರೆ ಶಾಲೆಯಿಂದ 1 ಕಿ.ಮೀ ದೂರ ಸಾಗಬೇಕು. ಬಿಸಿಯೂಟ ತಯಾರಿಸಲು ಸಹ ನೀರಿನ ಸಮಸ್ಯೆ ಎದುರಾಗುತ್ತಿದೆ.
ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB