nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    • ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆಂಬ ಭ್ರಮೆಯಿಂದ ಹೊರಬನ್ನಿ: ಡಿಕೆಶಿಗೆ ಬಿಜೆಪಿ ಗುದ್ದು
    ರಾಜ್ಯ ಸುದ್ದಿ March 22, 2022

    ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆಂಬ ಭ್ರಮೆಯಿಂದ ಹೊರಬನ್ನಿ: ಡಿಕೆಶಿಗೆ ಬಿಜೆಪಿ ಗುದ್ದು

    By adminMarch 22, 2022No Comments2 Mins Read
    dk shivakumar

    ನೀರಿನ ರಾಜಕಾರಣ ಮಾಡಿ ಮುಖ್ಯಮಂತ್ರಿ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಗೆ ಬಿಜೆಪಿ ಟಾಂಗ್ ನೀಡಿದೆ. ಮೇಕೆದಾಟು ಯೋಜನೆ ವಿಚಾರವಾಗಿ ಮಂಗಳವಾರ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.

    ‘ಮೇಕೆದಾಟು ಯೋಜನೆ(Mekedatu Project)ಯನ್ನು ಜಾರಿಗೊಳಿಸಲು ಬಿಡುವುದಿಲ್ಲ‌‌ವೆಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ‌ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು?’ ಅಂತಾ ಪ್ರಶ್ನಿಸಿದೆ.


    Provided by
    Provided by

    ‘ರಾಹುಲ್ ಗಾಂಧಿ(Rahul Gandhi)ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು. ಡಿಕೆಶಿಯವರೇ, ಇಲ್ಲಿ ಪಾದಯಾತ್ರೆ(Mekedatu Padayatre) ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ?’ ಅಂತಾ ಟೀಕಿಸಿದೆ.

    ರಾಜಕೀಯ ಲಾಭಕ್ಕಾಗಿ ಡಿಕೆಶಿ(DK Shivakumar)ಯವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ #ಸುಳ್ಳಿನಜಾತ್ರೆ ಮಾಡಿ ಅಭ್ಯಾಸವಿರುವ ಡಿಕೆಶಿ ಅವರಿಗೆ ಮತ್ತೊಂದು ಬಾರಿ ಪಾದಯಾತ್ರೆ ಮಾಡುವುದು ಕಷ್ಟವೇನಿಲ್ಲ. ಮೂರನೇ ಬಾರಿ ರಾಜ್ಯದ ಹಿತದೃಷ್ಟಿಯಿಂದ ತಮಿಳುನಾಡು ಕಡೆಗೆ ಪಾದಯಾತ್ರೆ ಮಾಡಿ. ನಿರೀಕ್ಷಿಸಬಹುದೇ? ಮೇಕೆದಾಟು ಪಾದಯಾತ್ರೆಯ ಮೂಲಕ ಬೆಂಗಳೂರಿನ 15ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿರುವುದಾಗಿ ಡಿಕೆಶಿ ಹೇಳಿದ್ದಾರೆ.

    ಅದು ನೀರಿಗಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಎಂಬುದು ಡಿಕೆಶಿಯವರ ಹೇಳಿಕೆಯಲ್ಲೇ ಸ್ಪಷ್ಟವಾಗುತ್ತದೆ. ಹೋಳಿ ಹಬ್ಬ ಮುಗಿದಿದೆ, ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲಾಗುತ್ತಿದೆ’ ಅಂತಾ ಬಿಜೆಪಿ ಕುಟುಕಿದೆ.ಕುಡಿಯುವ ನೀರಿಗಾಗಿ ರಾಜ್ಯ ಬಿಜೆಪಿ ಸರ್ಕಾರ(BJP Government) ಮಾಡುತ್ತಿರುವ ಯೋಜನೆಗೆ‌ ತಮಿಳುನಾಡಿನ ಕಾಂಗ್ರೆಸ್ ಮೈತ್ರಿ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಡಿಕೆಶಿ ಅವರಿಗೆ ತಮಿಳುನಾಡು ಸರ್ಕಾರದ ವಿರುದ್ಧ ಧ್ವನಿ ಎತ್ತುವ ತಾಕತ್ತು ಇದೆಯೇ? ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆ ಎನ್ನುವ ಭ್ರಮೆಯಿಂದ ಹೊರಗೆ ಬನ್ನಿ. ಮಹದಾಯಿ ಆಗಲಿ ಮೇಕೆದಾಟು ಆಗಲಿ ಕಾಂಗ್ರೆಸ್ ನಾಯಕರದು ಸದಾ ಇಬ್ಬಗೆಯ ನಿಲುವು. ಅಧಿಕಾರದಲ್ಲಿದ್ದಾಗ ಒಂದು ರೀತಿ, ಅಧಿಕಾರ ಕಳೆದುಕೊಂಡಾಗ ಇನ್ನೊಂದು ನೀತಿ. ತಮಿಳುನಾಡು ಸರ್ಕಾರ ತೆಗೆದುಕೊಂಡ ನಿರ್ಣಯದ ವಿರುದ್ಧ ಒಂದು ಸಾತ್ವಿಕ ಪ್ರತಿರೋಧ ತೋರುವ ಧೈರ್ಯವಾದರೂ ಡಿಕೆಶಿಯವರಿಗೆ ಇದೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

    ಮೇಕೆದಾಟು ಹೋರಾಟ(Mekedatu Project)ದ ನಾಟಕದ ಮೂಲಕ ಹಳೆ ಮೈಸೂರು ಭಾಗದಲ್ಲಿ ತಮ್ಮ ನಾಯಕತ್ವ ಪ್ರತಿಷ್ಠಾಪನೆ ಮಾಡುವುದಷ್ಟೇ ಡಿಕೆಶಿಯವರ ಉದ್ದೇಶವಾಗಿತ್ತು. ಆದರೆ ಪಾದಯಾತ್ರೆಯ ಉದ್ದೇಶಕ್ಕೆ ಅವರ ಮೈತ್ರಿ ಪಕ್ಷದಿಂದಲೇ ಅಡ್ಡಿಯುಂಟಾಗಿದೆ. ಡಿಕೆಶಿಯವರೇ ಜಲ ಜಪ ಮಾಡಿಕೊಂಡು ನಾಲ್ಕು ಹೆಜ್ಜೆ ನಡೆದವರೆಲ್ಲ ಭಗೀರಥರಾಗಲು ಸಾಧ್ಯವಿಲ್ಲ’ ಅಂತಾ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    December 5, 2025

    ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ!

    December 4, 2025

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ…

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.