ತುಮಕೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾದ ಹಿನ್ನೆಲೆ, ಮದ್ದೂರು ಬಳಿಯ ಶಿಂಷಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿತ್ತು.
ಹೀಗಾಗಿ ನಿನ್ನೆ ಸಂಜೆ ಬಟ್ಟೆ ತೊಳೆಯಲು ಇಳಿದಿದ್ದ ಏಳುಮಲೈ ಎಂಬವರು ನೀರಿನಲ್ಲಿ ಸಿಲುಕಿಕೊಂಡಿದ್ದಾರೆ. ನೀರು ಹೆಚ್ಚಾಗುತ್ತಿದ್ದಂತೆ ಕೂಗಿಕೊಂಡಿದ್ದ ಏಳುಮಲೈ ಸಹಾಯಕ್ಕೆ ಸ್ಥಳೀಯರು ಆಗಮಿಸಿದ್ದಾರೆ.
ಬಳಿಕ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ತಮಿಳುನಾಡು ಮೂಲದ ಏಳುಮಲೈ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700