ದಾವಣಗೆರೆ: ದಾವಣಗೆರೆ ಜಿಲ್ಲೆಯ ಬಸವಾ ಪಟ್ಟಣದಲ್ಲಿ ಸ್ನಾನಕ್ಕೆ ಹೋಗಿದ್ದ ವಿದ್ಯಾರ್ಥಿಯೊಬ್ಬ ಆಯತಪ್ಪಿ ಭದ್ರಾ ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಣಿಕಂಠ(16) ಮೃತ ಬಾಲಕನಾಗಿದ್ದಾನೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗಿದ್ದ ಮಣಿಕಂಠ ಪರೀಕ್ಷೆ ಮುಗಿಸಿ ವಾಪಸ್ ಬರುವಾಗ ಭದ್ರಾ ಕಾಲುವೆಯಲ್ಲಿ ಸ್ನಾನಕ್ಕೆಂದು ಹೋಗಿದ್ದಾನೆ. ಅವಾಗ ಈ ದುರ್ಘಟನೆ ಸಂಭವಿಸಿದೆ.
ಹರೋಸಾಗರದ ಬಳಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296