ನೀಟ್ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪ್ರವೇಶಕ್ಕೆ ನೊಂದಣಿ ಮಾಡಿ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಜುಲೈ 31ರ ಬೆಳಿಗ್ಗೆ 11 ಗಂಟೆಯಿಂದ ಆಗಸ್ಟ್ 1 ರ ಮಧ್ಯಾಹ್ನ 11. 59ರವರೆಗೆ ಅರ್ಹತೆಗೆ ಅನುಗುಣವಾಗಿ ಅರ್ಜಿಯಲ್ಲಿನ ಮಾಹಿತಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ನೀಟ್ ಅರ್ಜಿಯಲ್ಲಿ ಡಿಕ್ಲರೇಷನ್ ಮಾಡಿರುವ, ಆದರೆ ಇನ್ನೂ ಶುಲ್ಕ ಪಾವತಿ ಮಾಡದಿರುವ ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಪಾವತಿಸಿ ನಂತರ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ ಎಂದು ಕೆ ಇ ಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.
ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಜುಲೈ 26 ಮತ್ತು 28 ರಂದು ನೀಟ್ ಅರ್ಜಿ ಸಲ್ಲಿಸಿದ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಆಗಸ್ಟ್ 1ರಂದು ಮಧ್ಯಾಹ್ನ 3 ರಿಂದ ರಿಂದ 4 ಗಂಟೆವರೆಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಜುಲೈ 25ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹವಾಮಾನ ವೈಪರೀತ್ಯ, ಮಳೆಯ ಕಾರಣದಿಂದ ಗೈರುಹಾಜರಾಗಿದ್ದವರೂ ಸಹ ಆ. 1ರಂದು ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬಹುದು ಎಂದು ಕೆಇಎ ರಮ್ಯಾ ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್ ಸೈಟಿನಿಂದ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಈ ಬಗ್ಗೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿಯನ್ನು ಕಳುಹಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


