ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪುರಸಭೆಯ ಆಡಳಿತದಲ್ಲಿ ನಡೆದ ಖರ್ಚು ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ (RTI) ಅಡಿಯಲ್ಲಿ ಕೇಳಿದರೂ, ಸಂಬಂಧಪಟ್ಟ ಅಧಿಕಾರಿಗಳು ದಾಖಲೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಪುರಸಭಾ ಸದಸ್ಯರು ಆರೋಪಿಸಿದ್ದಾರೆ.
ಪುರಸಭಾ ಸದಸ್ಯ ರೇಣುಕಾ ಪ್ರಸಾದ್ ಅವರು ಪುರಸಭಾ ನಿದಿ ಅಡಿಯಲ್ಲಿ ಆಡಳಿತಧಿಕಾರಿಗಳ ಅವಧಿಯಲ್ಲಿ ಜಮಾ ಮತ್ತು ಖರ್ಚಾಗಿರುವ ಹಣದ ವಿವರಗಳನ್ನು RTI ಮೂಲಕ ಕೇಳಿದ್ದರು. ಆದರೆ, ಅಧಿಕಾರಿಗಳು ತಕ್ಕ ಸಮಯದಲ್ಲಿ ಮಾಹಿತಿ ನೀಡದೆ, ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ರೇಣುಕಾ ಪ್ರಸಾದ್, “ಮಾಹಿತಿ ಹಕ್ಕು ಕಾಯ್ದೆ ಪ್ರಕಾರ, ಸಾರ್ವಜನಿಕರಿಗೆ 30 ದಿನಗಳೊಳಗೆ ಮಾಹಿತಿ ನೀಡಬೇಕು. ಆದರೆ ಅಧಿಕಾರಿಗಳು ಇದನ್ನು ಉಲ್ಲಂಘಿಸಿ ದಾಖಲೆಗಳನ್ನು ಮರೆಮಾಚುತ್ತಿದ್ದಾರೆ. ಇದು ಜನತೆಗೆ ಉತ್ತರದಾಯಿತ್ವ ತಲುಪಿಸುವ ಆಡಳಿತದ ಮೇಲಿನ ವಿಶ್ವಾಸವನ್ನು ಕುಂದಿಸುತ್ತದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಅಧಿಕಾರಿಗಳ ಈ ನಡೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗೂ ಸಾರ್ವಜನಿಕ ಹಣದ ಬಳಕೆಯ ವಿವರಗಳನ್ನು ಬಹಿರಂಗಪಡಿಸುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ದೂರು ಸಲ್ಲಿಸುವ ಯೋಚನೆಯಲ್ಲಿ ಇದ್ದಾರೆ ಎಂದು ಅವರು ತಿಳಿಸಿದರು.
ಈ ಬಗ್ಗೆ ಜಿಲ್ಲಾ ಆಡಳಿತ ಮತ್ತು ಉನ್ನತಾಧಿಕಾರಿಗಳು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4