ಮನೆಯ ಮಹಡಿಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ 11 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ಅರಂತೋಡಿನ ಹೊನ್ನಪ್ಪ ಮಡಿವಾಳ ರವರ ಮಗ ಕೇಶವ (32). ಇವರು ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು.ಅವರು ಕೊರೊನಾ ಬಳಿಕ ಬೆಂಗಳೂರಿನಿಂದ ಊರಿಗೆ ಹಿಂತಿರುಗಿದ್ದರು. ಸದ್ಯ ಅವರು ವರ್ಕ್ ಪ್ರಮ್ ಹೋಮ್ ಮಾದರಿಯಲ್ಲಿ ಮನೆಯಲ್ಲಿದೆ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಮನೆಯವರೆಲ್ಲ ಹೊರ ಹೋಗಿದ್ದ ವೇಳೆ ಕೇಶವರವರು ಮನೆಯ ಮಹಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಮನೆಯವರು ದೇವಸ್ಥಾನಕ್ಕೆ ಹೋಗಿದ್ದರು ಎನ್ನಲಾಗಿದೆ.ಮನೆಯವರು ದೇವಸ್ಥಾನದಿಂದ ವಾಪಸ್ಸು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯೂ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ಥಳದಲ್ಲಿ ಡೆತ್ ನೋಟ್ ಲಭಿಸಿದ್ದು, ಅದನ್ನು ಹಾಗೂ ಅವರು ಬಳಸುತ್ತಿದ್ದ ಲ್ಯಾಪ್ ಟಾಪ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರು ಅವಿವಾಹಿತರಾಗಿದ್ದು, ತಂದೆ,ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy