ತುಮಕೂರು: ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಶಾಸ್ತ್ರಿನಗರ ಮೂಲದ ಸೋಹಮನ್ ನಾಥ್ ಬಾಲಂಕರ್(24) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದು, 6th ಸೆಮಿಸ್ಟರ್ ನಲ್ಲಿ ಈತ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ಕಾರಣಗಳೇನು ಎನ್ನುವುದು ತಿಳಿದು ಬಂದಿಲ್ಲ. ವಿದ್ಯಾರ್ಥಿಯ ರೂಮಿನಲ್ಲಿ ಹಲವು ಔಷಧಿಗಳು, ಮಾತ್ರೆ ಲೇಬಲ್ ಗಳು ಪತ್ತೆಯಾಗಿವೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎನ್ ಇಪಿಎಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5