ಬೆಂಗಳೂರಿನ ಸದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪನ್ನಪಾಳ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನೇಣಿಗೆ ಶರಣಾದ ಮಹಿಳೆಯನ್ನು ಕತೀಜಾ ಕೂಬ್ರ(29) ಎಂದು ಗುರುತಿಸಲಾಗಿದೆ. ಗಂಡನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಮಗಳು ಮದುವೆಯಾಗಿಂದ ಗಂಡ ಜಗಳ ಮಾಡುತ್ತಿದ್ದ. ದೈಹಿಕವಾಗಿ ಹಲ್ಲೆ ಮಾಡುತ್ತಿದ್ದ. ಅವನಿಗೆ ಬೇರೊಬ್ಬಳೊಂದಿಗೆ ಸಂಬಂಧವಿತ್ತು. ಹೀಗಾಗಿ ಕತೀಜಾಳನ್ನ ಪತಿ ಮಹೆಬೂಬ್ ಪರೀಷನೇ ಕೊಂದಿದ್ದಾನೆ ಎಂದು ಕತೀಜಾ ತಂದೆ ಆರೋಪಿಸಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆಯಾಗಿದ್ದು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಮೃತ ಕತೀಜಾ ಅವರ ಗಂಡ , ಮಾವ ಮತ್ತು ನಾದಿನಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


