ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಕೆ.ಪೂರ್ಣಿಮಾ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕಿನ ಸರ್ಕಾರಿ ಅಧಿಕಾರಿಗಳ ತುರ್ತು ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕಳೆದ ಎರಡು ವರ್ಷಗಳಿಂದ ಕೋವಿಡ್ ಹಾಗೂ ಒಮಿಕ್ರೋನ್ ನಿಂದ ತತ್ತರಿಸಿದ ಜನ ಇದೀಗ ಅತಿಯಾದ ಮಳೆ ಗಾಳಿಯಿಂದ ರೈತರು ಬೆಳೆದ ಬೆಳೆಗಳು ನಷ್ಟವಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಆದರಿಂದ ಮಳೆಯಿಂದ ಬೆಳೆ ಹಾನಿಯಾಗಿರುವ ಮನೆ ಮತ್ತು ಬೆಳೆಗಳನ್ನು ಶೀಘ್ರದಲ್ಲೇ ಸರ್ವೇ ಮಾಡಿ ಸರ್ಕಾರದ ಪರಿಹಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ರೈತರು ಬೆಳೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳು ಯಾವುದೇ ನೆಪ ಹೇಳದೆ ಹಗಲು ರಾತ್ರಿ ಹಾಗೂ ರಜಾ ದಿನಗಳಲ್ಲೂ ಕರ್ತವ್ಯ ನಿರ್ವಹಿಸಿ ರೈತರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಅವರು ಮನವಿ ಮಾಡಿದರು.
ತಾಲ್ಲೂಕಿನಲ್ಲಿ ರೈತರು ಬೆಳೆದಿರುವಂತಹ ಅಡಿಕೆ, ತೆಂಗು, ಬಾಳೆ, ಈರುಳ್ಳಿ ಹತ್ತಿ, ದಾಳಿಂಬೆ, ಪಪ್ಪಾಯಿ, ಶೇಂಗಾ ಮುಂತಾದ ಬೆಳೆಗಳಿಗೆ ಮಳೆಯಿಂದ ಹಾನಿಯಾಗಿದ್ದು, ಈ ಕೂಡಲೇ ಹೋಬಳಿವಾರು ಸರ್ವೇ ಮಾಡಿ ವರದಿ ನೀಡುವಂತೆ ಶಾಸಕಿ ಪೂರ್ಣಿಮಾ ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಶಾಂತ ಕೆ. ಪಾಟೀಲ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಈಶ್ವರ ಪ್ರಸಾದ್, ಕೃಷಿ ಸಹಾಯಕ ನಿರ್ದೇಶಕಿ ಜೈಬ, ತೋಟಗಾರಿಕೆ ಅಧಿಕಾರಿ ಗುರುಸಿದ್ದಪ್ಪ, ಅರಣ್ಯಾಧಿಕಾರಿ ರಾಜಶೇಖರ್, ಎಇಇ ಹನುಮಂತಪ್ಪ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz