ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ವೇಳೆ ಸೌರ್ಯ ಏರ್ ಲೈನ್ಸ್ ವಿಮಾನ 9N-AME (CRJ 200) ಪತನಗೊಂಡಿದ್ದು, ವಿಮಾನದಲ್ಲಿದ್ದ 19 ಮಂದಿ ಪೈಕಿ 18 ಮಂದಿ ಸಾವನ್ನಪ್ಪಿದ ಘಟನೆ ನೇಪಾಳದ ಕಠ್ಮಂಡುವಿನಲ್ಲಿ ನಡೆದಿದೆ.
ಸದ್ಯ 13 ಜನರ ಮೃತದೇಹಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಮಾನದ ಪೈಲಟ್ 37 ವರ್ಷದ ಮನೀಶ್ ಶಾಕ್ಯಾ ಅವರನ್ನು ಅವಶೇಷಗಳಿಂದ ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಸಿನಮಂಗಲದ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು ಎಂದು ಮಾಹಿತಿ ನೀಡಿದೆ.
ವಿಮಾನವು ರನ್‌ವೇಯ ದಕ್ಷಿಣದ ತುದಿಯಿಂದ ಟೇಕಾಫ್ ಆಗುತ್ತಿದ್ದಾಗ, ರೆಕ್ಕೆಯ ತುದಿಯು ನೆಲಕ್ಕೆ ಅಪ್ಪಳಿಸುವುದರೊಂದಿಗೆ ಇದ್ದಕ್ಕಿದ್ದಂತೆ ಪಲ್ಟಿಯಾಗಿದೆ. ತಕ್ಷಣವೇ ಬೆಂಕಿ ಹೊತ್ತಿಕೊಂಡ ವಿಮಾನವು ನಂತರ ರನ್‌ವೇಯ ಪೂರ್ವ ಭಾಗದಲ್ಲಿರುವ ಕಮರಿಗೆ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA