ಪಾವಗಡ: ಪಾವಗಡ ತಾಲ್ಲೂಕು ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಮ್ಮನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತು 5 ತಿಂಗಳಾದರೂ ಇದನ್ನು ಸರಿಪಡಿಸಲು ಇನ್ನೂ ಅಧಿಕಾರಿಗಳು, ಜನ ಪ್ರತಿನಿಧಿಗಳು ಮುಂದಾಗಿಲ್ಲ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಆಕ್ರೋಶ ವ್ಯಕ್ತಪಡಿಸದ್ದಾರೆ.
ಸುಮಾರು ಒಂದು ಸಾವಿರ ಜನಸಂಖ್ಯೆಯುಳ್ಳ ಈ ಗ್ರಾಮದಲ್ಲಿ ಪಾನ್ ಏಷ್ಯಾ ವರ್ಲ್ಡ್ ವೈಡ್ ಕಂಪೆನಿಯ ಸಹಭಾಗಿತ್ವದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಪ್ರಾರಂಭಿಸಿದ್ದು, ಇದು ಕಳಪೆ ಗುಣಮಟ್ಟಾದ್ದಾಗಿರುವುದರಿಂದ ಆಗಾಗ್ಗೆ ಕೆಟ್ಟು ಹೋಗುತ್ತಿದೆ ಎಂದು ಅವರು ದೂರಿದರು.
5 ತಿಂಗಳಿಂದ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತಿದ್ದು, ಇಲ್ಲಿನ ಜನತೆ ಕುಡಿಯುವ ನೀರಿಗಾಗಿ ಐದಾರು ಕಿ.ಮೀ. ಹೋಗಿ ನೀರು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಾಗೂ ಸ್ಥಳೀಯ ಜನ ಪ್ರತಿನಿದಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದೇ ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಕೂಡ ದೂರಿದ್ದಾರೆ.
ಸಾರ್ವಜನಿಕರ ದೂರಿನ ಮೇರೆಗೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಇಂದು ಸ್ಥಳ ಪರಿಶೀಲಿಸಿ, ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy