ಪಾವಗಡ: ತಾಲೂಕಿನ ನಿಡಗಲ್ಲು ಹೋಬಳಿ ದೇವಲಕೆರೆ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಕರಡಿಯೊಂದು ರಾತ್ರಿ ಕಳೆದಿದೆ.
ತಾಲೂಕಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದ ರಕ್ಷಣೆ ಪಡೆಯಲು ಕರಡಿ ಮಂಜುಳಾ ಪುಟ್ಟರಾಜು ಎಂಬುವರ ನಿರ್ಮಾಣ ಹಂತದ ಮನೆಗೆ ಕರಡಿ ನುಗ್ಗಿದೆ ಎನ್ನಲಾಗಿದೆ.
ಬುಧವಾರ ಬೆಳಿಗ್ಗೆ ಮನೆ ಬಳಿ ಹೋದಾಗ ಮನೆಯಲ್ಲಿ ಕರಡಿ ಮಲಗಿರುವುದನ್ನು ಗಮನಿಸಿದ ಮನೆಯ ಮಾಲೀಕರು ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ ಗ್ರಾಮಸ್ಥರ ಸಹಕಾರದೊಂದಿಗೆ ಕರಡಿಯನ್ನು ಓಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy