ಪುತ್ತೂರು: ನಿಶ್ಚಿತಾರ್ಥ ನಿಗದಿಯಾಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಮುಂಡ್ಯ ಕರಂಟಿಯಡ್ಕದಲ್ಲಿ ನಡೆದಿದೆ.
ಇಲ್ಲಿನ ಸುಳ್ಯಪದವು ಶಬರಿ ನಗರದ ನಿವಾಸಿ ರವಿರಾಜ್ ಪೂಜಾರಿ(31) ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದು, ರವಿರಾಜ್ ಪ್ರೀತಿಸುತ್ತಿದ್ದ ಯುವತಿಯ ಜೊತೆಗೆ ಮದುವೆಯಾಗಲು ಪೋಷಕರು ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ರವಿರಾಜ್ ಕುಂದಾಪುರ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದು, ಆಕೆಯನ್ನೇ ಮದುವೆಯಾಗಲು ನಿರ್ಧರಿಸಿದ್ದರು. ಯುವತಿಯ ಮನೆಯವರು ಕೂಡ ಮದುವೆಗೆ ಒಪ್ಪಿಗೆ ನೀಡಿದ್ದರು. ಮದುವೆ ಮಾತುಕತೆ ನಡೆಸಲು ರವಿರಾಜ್ ಮನೆಗೆ ಯುವತಿಯ ಕಡೆಗೆ ಬರಲು ಮುಂದಾಗಿದ್ದರು ಎನ್ನಲಾಗಿದೆ.
ಈ ನಡುವೆ ರವಿರಾಜ್ ಮನೆಯಲ್ಲಿ ಆತನ ಒಪ್ಪಿಗೆಯಿಲ್ಲದೆ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ನಿಗದಿ ಮಾಡಿದ್ದರಿಂದ ನೊಂದ ರವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700