ಭಾರತೀಯ ನೋಟುಗಳ ಮೇಲೆ ಮಹಾತ್ಮಗಾಂಧೀಜಿ ಭಾವಚಿತ್ರದ ಬದಲು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಫೋಟೊ ಹಾಕಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಆಗ್ರಹಿಸಿದೆ.
ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪಾತ್ರ ಮಹಾತ್ಮಾ ಗಾಂಧೀಜಿಗಿಂತ ಕಡಿಮೆ ಏನಿಲ್ಲ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಹೇಳಿದೆ.
ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಅವರಿಗಂತ ಸುಭಾಷ್ ಚಂದ್ರ ಬೋಸ್ ಅವರ ಹೋರಾಟ ಕಡಿಮೆ ಏನಿಲ್ಲ. ಹಾಗಾಗಿ ಅವರ ಭಾವಚಿತ್ರವನ್ನು ನೋಟುಗಳ ಮೇಲೆ ಮುದ್ರಿಸುವ ಮೂಲಕ ಅವರಿಗೂ ಗೌರವ ಸಲ್ಲಿಸಬೇಕು ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಪಶ್ಚಿಮ ಬಂಗಾಳದ ರಾಜ್ಯ ಕಾರ್ಯಧ್ಯಕ್ಷ ಚಂದ್ರಚೂಡ್ ಗೋಸ್ವಾಮಿ ತಿಳಿಸಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾದ ಹೊಸ ವಾದಕ್ಕೆ ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದ್ದು, ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಜನರ ದಿಕ್ಕು ತಪ್ಪಿಸಲು ಇಂತಹ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


