ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಅವರೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೆಟ್ಟಾರು ಗ್ರಾಮದ ಪ್ರವೀಣ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಪ್ರವೀಣ್ ಕುಟುಂಬದವರಿಗೆ ಧೈರ್ಯ ಹೇಳಿದ ಸಿಎಂ ರಾಜ್ಯ ಬಿಜೆಪಿ ಸರ್ಕಾರ ನಿಮ್ಮೊಂದಿಗಿದೆ ಎಂದು ಅಭಯ ನೀಡಿದ್ದಾರೆ. ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ ಚೆಕ್ ಹಸ್ತಾಂತರಿಸಿದ್ದಾರೆ.
ಭೇಟಿ ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇದು ಕೊಲೆ ಮಾತ್ರ ಅಲ್ಲ, ಇದೊಂದು ದೇಶದ್ರೋಹದ ಕೆಲಸವಾಗಿದೆ. ಅತಿ ಶೀಘ್ರವೇ ಕೊಲೆ ಆರೋಪಿಗಳ ಬಂಧನವಾಗಲಿದೆ. ಇದನ್ನು ಕೇವಲ ಒಂದು ಕೊಲೆ ಪ್ರಕರಣವಾಗಿ ನೋಡುತ್ತಿಲ್ಲ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz