ತುಮಕೂರು: ಹನಿಟ್ರ್ಯಾಪ್ ವಿಚಾರದಲ್ಲಿ ಜಡ್ಜ್ ಗಳು ಸೇರಿದ್ದಾರೆ ಎಂದು ನಾನು ಹೇಳಿಯೇ ಇಲ್ಲ ಅದು ಸುಳ್ಳು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಕೀಲರೊಬ್ಬರು ಪಿಐಎಲ್ ಸಲ್ಲಿಸಿದ್ದಾರೆ, ಆದರೆ ನಾನು ಜಡ್ಜ್ ಗಳ ಹೆಸರನ್ನು ಪ್ರಸ್ತಾಪ ಮಾಡಿಯೇ ಇಲ್ಲ ಎಂದು ಹೇಳಿದ್ದಾರೆ.
ಎಲ್ಲಾ ಪಕ್ಷಗಳ ಪ್ರಮುಖ ರಾಜಕಾರಣಿ ಗಳು ಸೇರಿದ್ದಾರೆ ಎಂದು ಹೇಳಿದ್ದೇನೆಯೇ ಹೊರತು ಜಡ್ಜ್ ಗಳು ಎಂದು ಹೇಳಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇಂದು ನನ್ನ ಹೇಳಿಕೆ ಸಂಬಂಧ ಗೃಹ ಮಂತ್ರಿಗಳಿಗೆ ಕಂಪ್ಲೇಂಟನ್ನು ಕೊಡುತ್ತಿದ್ದೇನೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4