ಬೆಳಗಾವಿ : ತಮ್ಮ 32 ವರ್ಷಗಳ ಸೇವಾ ಅವಧಿಯಲ್ಲಿ ಅಗ್ನಿಶಾಮಕ ದಳದಲ್ಲಿ ಜನರ ಪ್ರಾಣ ಜನ ರಕ್ಷಣೆ,ಆಸ್ತಿಪಾಸ್ತಿ ರಕ್ಷಣೆ ಸೇರಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಸಂಕೇಶ್ವರದ ಅಗ್ನಿಶಾಮಕ ನಿವೃತ್ತ ಠಾಣಾಧಿಕಾರಿ ಮಹಾಲಿಂಗಪ್ಪ ಮುಧೋಳ ಅವರು ಈ ಸಾಲಿನ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದುಕೊಂಡಿದ್ದಾರೆ.
ಇತ್ತೀಚಿಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ನಡೆದ ಪದಕ ಪ್ರಧಾನ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕ ಪ್ರಧಾನ ಮಾಡಿ ಗೌರವಿಸಿದರು.ಗೃಹ ಸಚಿವ ಅರಗ ಜ್ಞಾನೇಂದ್ರ ಉಪಸ್ಥಿತರಿದ್ದರು.
ಜುಲೈ 13,1988ರಿಂದ ಅಗ್ನಿ ಶಾಮಕ ಇಲಾಖೆಯಲ್ಲಿ ಸೇವೆಗೆ ಸೇರಿದ ಮಹಾಲಿಂಗಪ್ಪ ಮುಧೋಳ ತಮ್ಮ 32ವರ್ಷಗಳ ಸುಧೀರ್ಘ ಅವಧಿಯಲ್ಲಿ ಪ್ರಮುಖ ಅಗ್ನಿಶಾಮಕ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ, ಅಗ್ನಿಶಾಮಕ ಠಾಣಾಧಿಕಾರಿಯಾಗಿ ಇತ್ತೀಚಿಗೆ ನಿವೃತ್ತಿಯಾಗಿದ್ದಾರೆ.
ತಮ್ಮ ಸೇವಾ ಅವಧಿಯಲ್ಲಿ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿ ಜನರ ಪ್ರಾಣ, ಆಸ್ತಿಪಾಸ್ತಿ ರಕ್ಷಣೆ ಮಾಡಿ ಅತ್ಯುತ್ತಮ ಕೆಲಸ ನಿರ್ವಹಿಸಿದ್ದಾರೆ.ಇವರ ನಿಸ್ವಾರ್ಥ ಸೇವೆ ಗುರ್ತಿಸಿ ಈ ಪದಕಪ್ರಧಾನ ಮಾಡಲಾಗಿದೆ.ಪದಕ ಪಡೆದ ಮಹಾಲಿಂಗಪ್ಪ ಮುಧೋಳ್ ಗೆ ಅಗ್ನಿಶಾಮಕ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


