ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರು ಗ್ರಾಮದಲ್ಲಿ ನೂತನವಾಗಿ ಗ್ರಂಥಾಲಯ ನಿರ್ಮಾಣ ಕಾರ್ಯಕ್ಕೆ ಶಾಸಕಿ ಮಂಜುಳಾ ಲಿಂಬಾವಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರ್ವಾಹ ಅಧಿಕಾರಿ ವಸಂತ್ ಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಬಿ. ಎನ್. ನಟರಾಜ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಸ್ವಾಮಿ, ಉಪಾಧ್ಯಕ್ಷರಾದ ಶ್ರೀ ನವೀನ ರೆಡ್ಡಿ ಸೇರಿದಂತೆ ಪಂಚಾಯತ್ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರು ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಶಾಸಕಿ ಮಂಜುಳಾ ಲಿಂಬಾವಳಿ ಭಾಗವಹಿಸಿದರು. ಈ ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇರುವ ಕುಂದುಕೊರತೆ ಬಗ್ಗೆ ಚರ್ಚಿಸಿ, ಅವುಗಳ ನಿವಾರಣೆಗೆ ಶೀಘ್ರವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಗ್ರಾಮದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸಹಾಯ ಧನ ವಿತರಿಸಲಾಯಿತು.


