ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯಲ್ಲಿರುವ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಹಾಗೂ ಕಾಫಿ ಬಾರ್‌ಗಳಿಗೆ ಹೊಸ ನಿಯಮಗಳನ್ನ ಜಾರಿಗೊಳಿಸಿದೆ.
ಬಿಬಿಎಂಪಿ ಹೊಸ ನಿಯಮ ಏನು?
* 30 ಕೊಠಡಿಗಳಿಗಿಂತ ಮೇಲ್ಪಟ್ಟ ಹೋಟೆಲ್, ಬಾರ್ & ರೆಸ್ಟೋರೆಂಟ್, ಪಬ್ ಇದ್ರೆ 30 ಕುರ್ಚಿ ಇರುವ ಧೂಮಪಾನ ಪ್ರದೇಶ ನಿಗದಿ ಮಾಡಬೇಕು
* ಧೂಮಪಾನ ವಲಯ ನಿರ್ಮಾಣ ಮಾಡಿ ಪೋಟೋ ಸಮೇತ ಸ್ಮೋಕಿಂಗ್ ಝೂನ್ ಗೆ ಪರವಾನಗಿಗೆ ಅರ್ಜಿ ಹಾಕಬೇಕು.
* ಅಧಿಕಾರಿಗಳು ಸ್ಥಳಕ್ಕೆ ಭೇಟಿ ನಿಯಮಾನುಸಾರ ಸ್ಮೋಕಿಂಗ್ ಝೂನ್ ಇದೆಯೇ ಅಂತ ರಿಪೋರ್ಟ್ ಕೊಟ್ಟರೆ, ಆಮೇಲೆ ಎನ್‌ಒಸಿ ವಿತರಣೆಗೆ ಸೂಚನೆ ನೀಡಲಾಗುತ್ತದೆ.
* ಸ್ಮೋಕಿಂಗ್ ಏರಿಯಾ ಕೊಠಡಿಗೆ ಎಂಟ್ರಿ ಆದಾಗ ಸ್ವಯಂಚಾಲಿತವಾಗಿ ಬಾಗಿಲು ಬಂದ್ ಆಗುವ ರೀತಿಯಲ್ಲಿ ಇರಬೇಕು
* ಸ್ಮೋಕಿಂಗ್ ಏರಿಯಾ ಅಂತ ನಾಮಫಲಕ ದೊಡ್ಡದಾಗಿ ಇರಬೇಕು. 60–30ರ ನಿಯಮದಲ್ಲಿ ಅಕ್ಷರಗಳು ಇರಬೇಕು
* ಸ್ಮೋಕಿಂಗ್ ಝೂನ್ ಗಳಲ್ಲಿ ಏರ್ ಫ್ಲೋ ಸಿಸ್ಟಂ ಇರಬೇಕು. ಪಕ್ಕದ ಮನೆ ಅಥವಾ ಪಕ್ಕದ ಕಟ್ಟಡಗಳಿಗೆ ಹೊಗೆ ಹೋಗುವಂತೆ ಇರಬಾರದು
* ಸ್ಮೋಕಿಂಗ್ ಝೂನ್ ನಿಯಮ ಉಲ್ಲಂಘನೆಯಾದ್ರೆ ಕಾನೂನು ಕ್ರಮ ಮತ್ತು ದಂಡ ವಿಧಿಸಲಾಗುತ್ತದೆ ಎಂದು ಬಿಬಿಎಂಪಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


