ಆರಂಭಿಕ ಡೆವೊನ್ ಕಾನ್ವೆ ಮತ್ತು ಗ್ಲೆನ್ ಫಿಲಿಪ್ಸ್ ಅವರ ಅರ್ಧಶತಕಗಳ ನೆರವಿನಿಂದ ನ್ಯೂಜಿಲೆಂಡ್ ತಂಡ ಮೂರನೇ ಟಿ-20 ಪಂದ್ಯದಲ್ಲಿ ಭಾರತ ತಂಡಕ್ಕೆ 161 ರನ್ ಗುರಿ ಒಡ್ಡಿದೆ.
ನೇಪಿಯಾರ್ ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದ ನ್ಯೂಜಿಲೆಂಡ್ ತಂಡ ಮೊಹಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ಅವರ ಮಾರಕ ದಾಳಿಗೆ ತತ್ತರಿಸಿ 19.4 ಓವರರ್ ಗಳಲ್ಲಿ 160 ರನ್ ಗೆ ಆಲೌಟಾಗಿದೆ.
ನ್ಯೂಜಿಲೆಂಡ್ ತಂಡ ಆರಂಭದಲ್ಲೇ ಫಿನ್ ಆಲೆನ್ (3) ಮತ್ತು ನಂತರ ಬಂದ ಮಾರ್ಕ್ ಚಾಂಪ್ ಮನ್ (12) ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು.
ಡೆವೊನ್ ಕಾನ್ವೆ ಮತ್ತು ಗ್ಲೆನ್ ಫಿಲಿಪ್ಸ್ ಮೂರನೇ ವಿಕೆಟ್ ಗೆ 74 ರನ್ ಜೊತೆಯಾಟದ ಮೂಲಕ ತಂಡವನ್ನು ಆಧರಿಸಿದರು. ಡೆವೊನ್ ಕಾನ್ವೆ 49 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 59 ರನ್ ಸಿಡಿಸಿ ಔಟಾದರೆ, ಫಿಲಿಪ್ಸ್ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 3 ಸಿಕ್ಸರ್ ಸಹಾಯದಿಂದ 54 ರನ್ ಬಾರಿಸಿದರು.
ಇವರಿಬ್ಬರು ನಿರ್ಗಮಿಸಿದ ನಂತರ ಭಾರತೀಯ ಬೌಲರ್ ಗಳು ತಿರುಗೇಟು ನೀಡಿದ್ದರಿಂದ ನ್ಯೂಜಿಲೆಂಡ್ ನಾಟಕೀಯ ಕುಸಿತ ಕಂಡು ಬೃಹತ್ ಮೊತ್ತ ದಾಖಲಿಸುವ ಅವಕಾಶ ಕಳೆದುಕೊಂಡಿತು. ಭಾರತದ ಪರ ಮೊಹಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ತಲಾ 4 ವಿಕೆಟ್ ಪಡೆದು ಮಿಂಚಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz