ನವ ವಿವಾಹಿತ ಜೋಡಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ. ಮನೋಜಕುಮಾರ ಪೋಳ(30), ರಾಖಿ(23) ಮೃತ ದುರ್ದೈವಿಗಳು ಎನ್ನಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಕುಟುಂಬದ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು ಎನ್ನಲಾಗಿದೆ.
ತಡರಾತ್ರಿ ಮನೆಯಲ್ಲಿ ದಂಪತಿಗಳು ಇಬ್ಬರು ಮಾತ್ರ ಇದ್ದು, ಈ ವೇಳೆಯೇ ನವ ಜೋಡಿ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದೆ. ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮನೋಜಕುಮಾರ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದು, ಇಂದು ಬೆಳಗ್ಗೆ ಮನೆಯವರು ಮನೆಗೆ ವಾಪಸ್ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ. ಆದರೆ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296