ಸಿಡಿಲು ಬಡಿದು ನವ ವಿವಾಹಿತ ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಸೋಮಸುಂದರ್ (34) ಮೃತಪಟ್ಟವರು. ಕಡಬ ತಾಲೂಕಿನ ಸುಬ್ರಹ್ಮಣ್ಯದ ಪರ್ವತಮುಖಿ ನಿವಾಸಿಯಾಗಿರುವ ಸೋಮಸುಂದರ್ ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಇವರು ಕೇವಲ 10 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.
ನಿನ್ನೆ ಸಂಜೆ ಸುರಿದ ಮಳೆ ಆರಂಭದ ಮೊದಲು ಗುಡುಗು ಗಾಳಿ ಬೀಸುತ್ತಿತ್ತು. ಆಗ ಮನೆಯಂಗಲದಲ್ಲಿದ್ದ ಒಣಗಿಸುತ್ತಿದ್ದ ಅಡಿಕೆಯನ್ನು ಸೋಮಸುಂದರ್ ರವರು ರಾಶಿ ಹಾಕಲು ತೆರಳಿದ್ದರು. ಆ ವೇಳೆ ಜೋರಾಗಿ ಸಿಡಿಲು ಬಡಿದಿದೆ. ಅವರು ಅಲ್ಲೇ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಕಡಬದ ಸಮುದಾಯ ಆಸ್ಪತ್ರೆಗೆ ಕರೆದೊಯ್ದಲಾಗಿದೆ. ಆದರೆ ದುರದೃಷ್ಟವಶಾತ್ ಆ ವೇಳೆಗಾಗಲೇ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಕೇವಲ 10 ದಿನಗಳ ಹಿಂದೆ ಮದುವೆಯಾಗಿದ್ದ ಅವರ ದುರ್ಮರಣ ಇಡೀ ಕುಟುಂಬವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


