nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    September 22, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026
    Facebook Twitter Instagram
    ಟ್ರೆಂಡಿಂಗ್
    • ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು
    • ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    • ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್
    • ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ
    • ರಾಜ್ಯಾದ್ಯಂತ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಗಳಿಗೆ ಶಾಕ್!
    • ಡಿಸಿಎಂ ತವರಲ್ಲೇ ದಲಿತ ಅಪ್ರಾಪ್ತ ಬಾಲಕನ ಭೀಕರ ಕೊಲೆ: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದೇ ತಪ್ಪಾಯ್ತಾ?
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    ಜಿಲ್ಲಾ ಸುದ್ದಿ September 22, 2026

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    By Ganesh TumkuruSeptember 22, 2026No Comments2 Mins Read
    hassan

    ಹಾಸನ: ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಹೇಮಾವತಿ ಎಡದಂಡೆ ನಾಲೆ ಬಳಿ ಎರಡುವರೆ ತಿಂಗಳ ಗರ್ಭಿಣಿಯಾಗಿದ್ದ ನವವಿವಾಹಿತೆ ಜಯಶೀಲಾ ಬಿ.ಕೆ. (ಪ್ರಿಯಾಂಕ, 24) ಅನುಮಾನಾಸ್ಪದವಾಗಿ ಕಣ್ಮರೆಯಾಗಿದ್ದಾರೆ. ಈ ಘಟನೆ ಸಂಬಂಧ ಪತಿ ರಾಜಶೇಖರ ಮತ್ತು ಅವರ ಕುಟುಂಬಸ್ಥರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

    ಕುರುವಂಕ ಗ್ರಾಮದ ರಾಜಶೇಖರ (27) ಎಂಬಾತನ ಜೊತೆ ಪ್ರಿಯಾಂಕಾಗೆ ಸುಮಾರು 8 ತಿಂಗಳ ಹಿಂದೆ ಮದುವೆಯಾಗಿತ್ತು. ರಾಜಶೇಖರ ಬಡ್ಡಿ ವ್ಯವಹಾರ ಮಾಡುತ್ತಿದ್ದ ಎನ್ನಲಾಗಿದೆ. ಮದುವೆಯಾದಾಗಿನಿಂದಲೂ ವರದಕ್ಷಿಣೆಗಾಗಿ ಕಿರುಕುಳ ನೀಡಲಾಗುತ್ತಿತ್ತು ಹಾಗೂ ಈ ಸಂಬಂಧ ಎರಡು ಬಾರಿ ರಾಜಿ ಪಂಚಾಯ್ತಿ ಸಹ ನಡೆದಿತ್ತು ಎಂದು ತಿಳಿದುಬಂದಿದೆ.

    ಸೆಪ್ಟೆಂಬರ್ 19 ರಂದು ಎರಡುವರೆ ತಿಂಗಳ ಗರ್ಭಿಣಿಯಾಗಿದ್ದ ಜಯಶೀಲಾಳನ್ನು ಪತಿ ರಾಜಶೇಖರ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ. ಈ ವೇಳೆ ಜಯಶೀಲಾ ತನ್ನ ತಂದೆ ದೊರೆಸ್ವಾಮಿಗೆ ಕರೆ ಮಾಡಿ ಆಸ್ಪತ್ರೆಗೆ ಬರುವಂತೆ ತಿಳಿಸಿದ್ದಳು. ತಂದೆಗೆ ಫೋನ್ ಮಾಡಿದ್ದಕ್ಕೆ ಪತಿ ರಾಜಶೇಖರ ಹಾಗೂ ಅತ್ತೆ ವಿಜಯಲಕ್ಷ್ಮಿ ಜಗಳ ಮಾಡಿದ್ದರು. ಇದರಿಂದಾಗಿ ಜಯಶೀಲಾ ಮತ್ತೆ ತಂದೆಗೆ ಕರೆ ಮಾಡಿ ‘ಆಸ್ಪತ್ರೆಗೆ ಬರಬೇಡಿ’ ಎಂದು ಹೇಳಿದ್ದಳು.

    ಆಸ್ಪತ್ರೆಯಿಂದ ಹಿಂತಿರುಗುವಾಗ ಚಿಕ್ಕನಾಯಕನಹಳ್ಳಿ ಗ್ರಾಮದ ಹೇಮಾವತಿ ಎಡದಂಡೆ ನಾಲೆ ಬಳಿ ಬೈಕ್ ನಿಲ್ಲಿಸುವಂತೆ ಹೇಳಿ ಜಯಶೀಲಾ ನೀರಿಗೆ ಜಿಗಿದಿದ್ದಾಳೆ ಎಂದು ಪತಿ ರಾಜಶೇಖರ ಹೇಳಿಕೊಂಡಿದ್ದಾನೆ. ಆಕೆಯನ್ನು ರಕ್ಷಿಸಲು ತಾನೂ ನೀರಿಗೆ ಧುಮುಕಿದ್ದು, ನೀರು ಕುಡಿದಿದ್ದರಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾನೆ. ಅಲ್ಲದೆ, ವರದಕ್ಷಿಣೆಗಾಗಿ ಯಾವುದೇ ಕಿರುಕುಳ ನೀಡಿಲ್ಲ ಎಂದೂ ಪ್ರತಿಪಾದಿಸಿದ್ದಾನೆ.

    ವರದಕ್ಷಿಣೆ ಕಿರುಕುಳ ನೀಡಿ ಪತಿಯೇ ಜಯಶೀಲಾಳನ್ನು ನಾಲೆಗೆ ತಳ್ಳಿ ಹತ್ಯೆ ಮಾಡಿದ್ದಾನೆ ಎಂದು ಜಯಶೀಲಾ ಪೋಷಕರು ಆರೋಪಿಸಿದ್ದಾರೆ.

    ಜಯಶೀಲಾಗೆ ಈ ಮೊದಲೇ ಪ್ರೇಮಿಯ ಜೊತೆ ಮದುವೆಯಾಗಿತ್ತು. ಆಕೆಯ ಪೋಷಕರು ಬೆದರಿಸಿ, ಈ ವಿಚಾರ ಮುಚ್ಚಿಟ್ಟು ರಾಜಶೇಖರನೊಂದಿಗೆ ಎರಡನೇ ಮದುವೆ ಮಾಡಿಸಿದ್ದರು. ಅವರು ಮಾಡಿದ ತಪ್ಪಿನಿಂದ ನಮ್ಮ ಮಗನ ಜೀವನ ಹಾಳಾಗಿದೆ ಎಂದು ರಾಜಶೇಖರನ ಪೋಷಕರು ಪ್ರತ್ಯಾರೋಪ ಮಾಡಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಪತಿ ರಾಜಶೇಖರ, ಮಾವ ದೊರೆಸ್ವಾಮಿ ಹಾಗೂ ಅತ್ತೆ ವಿಜಯಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಣ್ಮರೆಯಾಗಿರುವ ಮಹಿಳೆಗಾಗಿ ಹುಡುಕಾಟ ಹಾಗೂ ತನಿಖೆ ಮುಂದುವರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ

    September 21, 2026

    ಬಾದಲಗಾಂವ ಗ್ರಾಮಕ್ಕೆ ಜಿ.ಪಂ. ಸಿಇಒ ಗಿತ್ತೆ ಮಾಧವವಿಠ್ಠಲರಾವ್ ದಿಢೀರ್ ಭೇಟಿ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

    September 21, 2026

    Leave A Reply Cancel Reply

    Our Picks

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ಅಮರಾವತಿ/ವಿಜಯವಾಡ: ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಅನ್ನದಾನ ಕಾರ್ಯಕ್ರಮದ ವೇಳೆ ತೀವ್ರ ಆಘಾತಕಾರಿ ಘಟನೆಯೊಂದು ನಡೆದಿದೆ. ಕುದಿಯುತ್ತಿದ್ದ ಸಾಂಬಾರ್‌…

    ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ

    September 22, 2026

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಹೈಕೋರ್ಟ್ ಸೂಚನೆ ಬಳಿಕ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ಕ್ಷಮೆಯಾಚನೆ

    September 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.