ತುಮಕೂರು: ತುಮಕೂರು ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿಯಾದ ಎಂ.ಆರ್.ಮಮತ ಅವರು ಇಂದು ದೈವಾಧೀನರಾಗಿದ್ದಾರೆ.
ಇವರು ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಪತಿ ಹಿರಿಯ ಪತ್ರಕರ್ತ ಎಚ್.ಆರ್.ರವೀಶ್, ಮಗ ಪ್ರಜ್ವಲ್ ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ತುಮಕೂರು ತಾಲ್ಲೂಕು ಹಾಲನೂರು ಗ್ರಾಮದ ಅವರ ತೋಟದಲ್ಲಿ ಆಗಸ್ಟ್ 3ರ ಶನಿವಾರ ಮಧ್ಯಾಹ್ನ ನೆರವೇರಲಿದೆ.
ಬೆಂಗಳೂರಿನ ಅವರ ಮನೆಯಲ್ಲಿ ಇಂದು ಸಂಜೆ 8 ಗಂಟೆಯಿಂದ ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು ಕುಟುಂಬ ಮೂಲಗಳು ತಿಳಿಸಿವೆ.
ಎಂ.ಆರ್.ಮಮತ ಅವರಿಗೆ ಇತ್ತೀಚೆಗೆ ಅನಾರೋಗ್ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296