ಮೈಸೂರು: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಜನವರಿ ಎರಡನೇ ವಾರದಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ವರದಿಗಳಿಂದ ತಿಳಿದು ಬಂದಿದೆ.
ಚಾಮರಾಜನಗರ ಜಿಲ್ಲೆಯ ಆದಿವಾಸಿಗಳು ಸೇರಿದಂತೆ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಲು 2002 ರಲ್ಲಿ ಬಿಳಿಗಿರಿರಂಗ ಬೆಟ್ಟದಲ್ಲಿ ಅಂದಿನ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು, ಸಂಪುಟ ಸಭೆ ನಡೆಸಿದ್ದರು. ಸರ್ಕಾರದ ನಿರ್ಧಾರ ಹಿನ್ನೆಲೆಯಲ್ಲಿ ಶಿಲ್ಪಾ ನಾಗ್ ಅವರು ಹನೂರಿನಲ್ಲಿ ಸಭೆ ನಡೆಸಿ, ಸ್ಥಳೀಯ ಅಧಿಕಾರಿಗಳ ಪ್ರತಿಕ್ರಿಯೆ, ಪ್ರದೇಶದ ಸಮಸ್ಯೆಗಳನ್ನು ಪಟ್ಟಿ ಮಾಡಲಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx